ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಜೆಟ್ ಇಂದು ಮಂಡನೆಯಾಗಲಿದೆ. ಸುಮಾರು 20,000 ಕೋಟಿ ರೂಗಳ ಬಜೆಟ್ ನ್ನು ಮಂಡಿಸಲಾಗುತ್ತಿದೆ.
ಭಾಷಣವನ್ನು ಶನಿವಾರ ಬೆಳಿಗ್ಗೆ 11 ಗಂಟೆಗೆ ಯೂಟ್ಯೂಬ್ ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಬಿಬಿಎಂಪಿಯ ಆಡಳಿತಾಧಿಕಾರಿ ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಮಕ್ಷಮದಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ। ಹರೀಶ್ ಕುಮಾರ್ ಸುಮಾರು 45 ರಿಂದ 50 ನಿಮಿಷ ಆಯವ್ಯಯದ ಭಾಷಣ ಮಂಡಿಸಲಿದ್ದಾರೆ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಆಡಳಿತಾಧಿಕಾರಿ ಎಸ್.ಆರ್.ಉಮಾಶಂಕರ್ ಅವರ ಸಮ್ಮುಖದಲ್ಲಿ ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು) ಹರೀಶ್ ಕುಮಾರ್ ಬಜೆಟ್ ಮಂಡಿಸಲಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ 2024-25ನೇ ಸಾಲಿನ ಆಯವ್ಯಯದ ಆಧಾರದ ಮೇಲೆ ಕೈಗೊಂಡ ಕ್ರಮಗಳ ವರದಿಯನ್ನು ಮಂಡಿಸಲಿದೆ. ರಾಜ್ಯ ಸರ್ಕಾರದಿಂದ ನಾವು 4,000 ಕೋಟಿ ರೂ.ಗಳ ಹೆಚ್ಚುವರಿ ಹಂಚಿಕೆಯನ್ನು ಪಡೆದಿರುವುದರಿಂದ ಒಟ್ಟು ಬಜೆಟ್ ಗಾತ್ರ ಹೆಚ್ಚಾಗುತ್ತದೆ. ನಾವು ವಿಶ್ವ ಬ್ಯಾಂಕ್ ಅನುದಾನ ಮತ್ತು ಇತರ ಆದಾಯದ ಮೂಲಗಳನ್ನು ಸಹ ಸೇರಿಸುತ್ತೇವೆ” ಎಂದು ಅವರು ಹೇಳಿದರು.