alex Certify BIG NEWS: 2,000 ಕೋಟಿ ಕಿಕ್ ಬ್ಯಾಕ್ ಆರೋಪ; ತನಿಖೆಗೆ ಆದೇಶಿಸಿ ಸಿಎಂ ಪ್ರಾಮಾಣಿಕತೆ ಸಾಬೀತುಪಡಿಸಲಿ; ಹೆಚ್.ಡಿ.ಕೆ. ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 2,000 ಕೋಟಿ ಕಿಕ್ ಬ್ಯಾಕ್ ಆರೋಪ; ತನಿಖೆಗೆ ಆದೇಶಿಸಿ ಸಿಎಂ ಪ್ರಾಮಾಣಿಕತೆ ಸಾಬೀತುಪಡಿಸಲಿ; ಹೆಚ್.ಡಿ.ಕೆ. ಆಗ್ರಹ

ನಾನು ರಾಜಕೀಯದಲ್ಲಿರುವವರೆಗೂ ಜಿಟಿಡಿಯನ್ನ ಜೆಡಿಎಸ್ ಗೆ ಸೇರಿಸಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ... - Just Kannada | Online Kannada News | Breaking Kannada News ...

ಬೆಂಗಳೂರು: ಸ್ವಪಕ್ಷೀಯ ನಾಯಕರೇ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದು, ನಿರಾವರಿ ಇಲಾಖೆಯಿಂದ 2,000 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ದೂರಲಾಗಿದೆ. ಸರ್ಕಾರ ಕೂಡಲೇ ಆರೋಪವನ್ನು ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

2006ರಲ್ಲಿ ಸಿಎಂ ಆಗಿದ್ದ ನನ್ನ ವಿರುದ್ಧ ಬಿಜೆಪಿ ನಾಯಕರೇ 150ಕೋಟಿ ಗಣಿ ಲಂಚ ಆರೋಪ ಮಾಡಿದ್ದರು. ಸರ್ಕಾರದ ಪಾಲುದಾರ ಪಕ್ಷದವರೇ ದೂರಿದ್ದರಿಂದ ನಾನು ಅದನ್ನು ಲೋಕಾಯುಕ್ತಕ್ಕೆ ವಹಿಸಿ ಪಾರದರ್ಶಕತೆ ಕಾದುಕೊಂಡಿದ್ದೆ. ಈಗಿನ ಸರ್ಕಾರದ ವಿರುದ್ಧ ಸ್ವಪಕ್ಷೀಯರೇ 2000 ಕೋಟಿ ನೀರಾವರಿ ಕಿಕ್‌ಬ್ಯಾಕ್‌ ಆರೋಪ ಮಾಡಿದ್ದಾರೆ. ಈಗ ತನಿಖೆಗೆ ಯಾಕೆ ಒಪ್ಪಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ಪುತ್ರಿ, ತಂದೆಯಿಂದಲೇ ಘೋರ ಕೃತ್ಯ

ರಾಕ್ಷಸ ಸರ್ಕಾರವೊಂದನ್ನು ಕೆಡವಿ ಅತ್ಯಂತ ಸಜ್ಜನ, ಸ್ವಚ್ಛ ಸರ್ಕಾರವನ್ನು ಪ್ರತಿಷ್ಠಾಪಿಸಿದವರೇ ಈ ಆರೋಪ ಮಾಡಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. ಸಿಎಂ ಬಿ.ಎಸ್. ಯಡಿಯೂರಪ್ಪ 2006ರಲ್ಲಿ ನಾನು ಇಟ್ಟಂತ ಹೆಜ್ಜೆಯನ್ನೇ ಇಟ್ಟು ತಾವು ಪ್ರಾಮಾಣಿಕ ಎಂಬುದನ್ನು ಸಾಬೀತು ಮಾಡಬೇಕು ಎಂದು ಹೆಚ್.ಡಿ.ಕೆ. ಒತ್ತಾಯಿಸಿದ್ದಾರೆ.

ಆಡಳಿತದಲ್ಲಿ ಮುಖ್ಯಮಂತ್ರಿಗಳ ಕುಟುಂಬಸ್ಥರು ಭಾಗಿಯಾಗಿದ್ದಾರೆ, ಸರ್ಕಾರದ ಹಂತದಲ್ಲಿ ಹಸ್ತಕ್ಷೇಪವಿದೆ ಎಂದು ಕೂಡ ಆರೋಪಿಸಲಾಗಿದೆ. ಜನರ ಸೇವೆಯಲ್ಲಿ ತೊಡಗಿರುವ ಸರ್ಕಾರದಲ್ಲಿ ಸಂಬಂಧವೇ ಇಲ್ಲದವರ ಹಸ್ತಕ್ಷೇಪ ಸರಿಯಲ್ಲ. ಹೀಗಾಗಿ ಈ ಬಗ್ಗೆಯೂ ಗಂಭೀರ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

https://www.facebook.com/1418673848396428/posts/2900840496846415/?sfnsn=wiwspwa

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...