ಬೆಳಗಾವಿ: ಮತಾಂತರ ನಿಷೇಧ ಮಾತ್ರವಲ್ಲ ಯಾವುದೇ ಕಾಯ್ದೆ ಜಾರಿಗೆ ತಂದರೂ ಅದನ್ನು ನಾವು ವಾಪಸ್ ಪಡೆಯುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಇಂದು ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಕುರುತು ಚರ್ಚೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, 2023ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಆಗ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಎಲ್ಲವನ್ನು ವಾಪಸ್ ಪಡೆಯುತ್ತೇವೆ ಆನ್ ರೆಕಾರ್ಡ್ ನಾನು ಇದನ್ನು ಹೇಳುತ್ತಿದ್ದೇನೆ ಎಂದು ಶಪಥ ಮಾಡಿದರು.
BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ; ಕ್ರಿಸ್ ಮಸ್ – ಹೊಸ ವರ್ಷಾಚರಣೆ ನಡುವೆಯೆ ಹೆಚ್ಚಿದ ಆತಂಕ
ಬಿಜೆಪಿಯವರು ಸಂಖ್ಯಾಬಲ ಇದೆ ಎಂದು ಏನು ಬೇಕಾದರೂ ಮಾಡಬಹುದು ಎಂದುಕೊಂಡಿದ್ದಾರೆ. ಯಾರೇ ಆಗಲಿ ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ವಿಧೇಯಕವನ್ನು ಮತಕ್ಕೆ ಹಾಕಲು ಪ್ಲಾನ್ ನಡೆಯುತ್ತಿದೆ. ವಿಧಾನಸಭೆಯಲ್ಲಿ ನಮಗೆ ಅಗತ್ಯ ಸಂಖ್ಯಾಬಲವಿಲ್ಲ, ಆದರೆ ವಿಧಾನ ಪರಿಷತ್ ನಲ್ಲಿ ನಮಗೆ ಬಹುಮತವಿದೆ ಎಂದರು.
ಇದೇ ವೇಳೆ ಜೆಡಿಎಸ್ ವಿರುದ್ಧ ಕಿಡಿಕಾರಿದ ಡಿ.ಕೆ. ಶಿವಕುಮಾರ್, ಜೆಡಿಎಸ್ ವಿಧಾನಸಭೆಯಲ್ಲಿ ಹೇಳುವುದು ಒಂದು ಮಾಡುವುದು ಒಂದು. ವಿಧೇಯಕ ಮಂಡನೆ ವೇಳೆ ವಿರೋಧ ಮಾಡುತ್ತಾರೆ. ಕೊನೆ ಹಂತದಲ್ಲಿ ಕೈಕೊಡುತ್ತಾರೆ. ಸಭಾತ್ಯಾಗ ಮಾಡುವುದು ಕೂಡ ಬಿಜೆಪಿಗೆ ಬೆಂಬಲಿಸಿದಂತೆ ಎಂದು ವಾಗ್ದಾಳಿ ನಡೆಸಿದರು.