alex Certify BIG NEWS: 2023ರ ಚುನಾವಣೆ; ಬಿಜೆಪಿ 130-140 ಸ್ಥಾನ ಗೆಲ್ಲುವ ವಿಶ್ವಾಸ ಎಂದ ಸಚಿವ ಆರ್. ಅಶೋಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 2023ರ ಚುನಾವಣೆ; ಬಿಜೆಪಿ 130-140 ಸ್ಥಾನ ಗೆಲ್ಲುವ ವಿಶ್ವಾಸ ಎಂದ ಸಚಿವ ಆರ್. ಅಶೋಕ್

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿಯೇ 2023ರ ಚುನಾವಣೆಯನ್ನು ಎದುರಿಸಲಾಗುವುದು. ಈ ಬಗ್ಗೆ ಈಗಾಗಲೇ ವರಿಷ್ಠರು ಕೂಡ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಆರ್.ಅಶೋಕ್, ಸಿಎಂ ಬೊಮ್ಮಾಯಿ ಓರ್ವ ಸರಳ ವ್ಯಕ್ತಿ. ಆರಂಭದಿಂದಲು ಎಲ್ಲರಿಗೂ ಗೊತ್ತಿರುವ ವಿಚಾರ. ಬೊಮ್ಮಾಯಿ ನಡೆ ಬಗ್ಗೆ ಶಾಸಕರಿಗೂ ತುಂಬಾ ಅಭಿಮಾನವಿದೆ. ಅಧಿವೇಶನದಲ್ಲಿ ವಿಪಕ್ಷಗಳನ್ನು ಕೂಡ ಸಮರ್ಥವಾಗಿ ಎದುರಿಸಿದ್ದಾರೆ. ಎಲ್ಲಾ ಶಾಸಕರ ಬೆಂಬಲ ಬೊಮ್ಮಾಯಿ ಅವರಿಗಿದೆ ಎಂದು ಹೇಳಿದರು.

BIG NEWS: ಅಪ್ರಾಪ್ತ ಬಾಲಕಿಯೊಂದಿಗೆ ಒಮ್ಮತದ ಲೈಂಗಿಕ ಕ್ರಿಯೆ ನಡೆಸಿ, ಪೋಕ್ಸೊ ಅಡಿ ಬಂಧಿತನಾಗಿದ್ದ ವ್ಯಕ್ತಿಯನ್ನು ಬಿಡುಗಡೆಗೊಳಿಸಿ ಕೋಲ್ಕತ್ತಾ ಹೈಕೋರ್ಟ್ ಮಹತ್ವದ ಆದೇಶ

2023ರ ಚುನಾವಣೆಯನ್ನು ಬೊಮ್ಮಾಯಿ ನೇತೃತ್ವದಲ್ಲೇ ಎದುರಿಸುತ್ತೇವೆ. ಚುನಾವಣೆಯಲ್ಲಿ ಬಿಜೆಪಿ 130-140 ಸ್ಥಾನಗಳನ್ನು ಗೆಲ್ಲಲಿದೆ. ಮುಂದಿನ ಸಿಎಂ ಯಾರು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ತಿಳಿಸಿದರು.
2023ರ ವಿಧಾನಸಭಾ ಚುನಾವಣೆ,ಬಿಜೆಪಿ 130-140

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...