ನವದೆಹಲಿ: ಕೇಂದ್ರ ಬಜೆಟ್ ನಲ್ಲಿ ದೇಶದ ಆರ್ಥಿಕ ಅಭಿವೃದ್ಧಿ, ಮೂಲ ಸೌಕರ್ಯ ಯೋಜನೆಗಳಿಗೆ ಒತ್ತು ನೀಡಿರುವ ಕೇಂದ್ರ ಸರ್ಕಾರ, ರೈತರಿಗೆ ಹಲವು ಅನುಕೂಲಕರ ಯೋಜನೆಗಳನ್ನು ಘೋಷಿಸಿದೆ. ರೈತರಿಗಾಗಿ ’ಒನ್ ಸ್ಟೇಷನ್ ಒನ್ ಪ್ರಾಡಕ್ಟ್’ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಕೇಂದ್ರ ಬಜೆಟ್ ಮಂಡನೆ ವೇಳೆ ಹಲವು ಯೋಜನೆಗಳನ್ನು ಘೋಷಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಮುಂದಿನ ಆರ್ಥಿಕ ವರ್ಷದಲ್ಲಿ ದೇಶದಲ್ಲಿ ಒಟ್ಟು 25 ಸಾವಿರ ಕಿ.ಮೀ. ಉದ್ದದಷ್ಟು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪಡಿಸಲು ನಿರ್ಧರಿಸಲಾಗಿದೆ. ರೈತರಿಗಾಗಿ ಒನ್ ಸ್ಟೇಷನ್ ಒನ್ ಪ್ರಾಡಕ್ಟ್ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, 4 ಸ್ಥಳಗಳಲ್ಲಿ ಮಲ್ಟಿ ಮಾಡೆಲ್ ಲಾಜೆಸ್ಟಿಕ್ ಪಾರ್ಕ್ ನಿರ್ಮಿಸಲಾಗುವುದು ಎಂದರು.
ಪ್ರಮುಖವಾಗಿ 2023ನ್ನು ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.