ನವದೆಹಲಿ: ದೇಶದಲ್ಲಿ 22 ಐಪಿಎಸ್ ಅಧಿಕಾರಿಗಳು ಕ್ರಿಮಿನಲ್ ಕೇಸ್ ಎದುರಿಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿದೆ.
ರಾಜ್ಯಸಭೆಯಲ್ಲಿ ಸಂಸದರೊಬ್ಬರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಕೇಂದ್ರ ಗೃಹ ಸಚಿವಾಲಯದ ರಾಜ್ಯ ಸಚಿವ ನಿತ್ಯಾನಂದ ರೈ, ಕಳೆದ 5 ವರ್ಷಗಳಲ್ಲಿ 22 ಐಪಿಎಸ್ ಅಧಿಕಾರಿಗಳು ವಿವಿಧ ಸೆಕ್ಷನ್ ಗಳ ಅಡಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು ವಿವಿ ಮತ್ತೊಂದು ಎಡವಟ್ಟು; ವೇಳಾ ಪಟ್ಟಿ ದಿನಾಂಕದ ಮೊದಲೇ ಪರೀಕ್ಷೆ ಮುಗಿಸಿದ ವಿಶ್ವವಿದ್ಯಾಲಯ; ವಿದ್ಯಾರ್ಥಿಗಳ ಆಕ್ರೋಶ
2017ರಿಂದ 2022 ಮಾರ್ಚ್ 30ರವರೆಗೆ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ 22 ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಉತ್ತರ ಪ್ರದೇಶದಲ್ಲಿ ಓರ್ವ ಪೊಲೀಸ್ ಅಧಿಕಾರಿ ಪರಾರಿ ಎಂದು ಘೋಷಿಸಲಾಗಿದೆ ಎಂದರು. ಅಲ್ಲದೇ ಪೊಲೀಸ್ ಪಡೆಗಳಲ್ಲಿ ಅಪರಾಧ ಪ್ರಕರಣಗಳನ್ನು ದಾಖಲಿಸುವುದು ಪ್ರಾಥಮಿಕವಾಗಿ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.