alex Certify BIG NEWS: 24 ಗಂಟೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡಬೇಕು; ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡಬೇಕು; ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಬೆಂಗಳೂರು: ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುವುದಾಗಿ ಹೇಳುತ್ತಿದ್ದಾರೆ. ಒಂದೊಮ್ಮೆ ಬಿ ಎಸ್ ವೈ ಕೆಳಗಿಳಿದರೆ ಪಂಚಮಸಾಲಿ ಸಮುದಾಯದವರನ್ನೇ ಸಿಎಂ ಮಾಡಬೇಕು ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ಬಿ ಎಸ್ ವೈ ಸಿಎಂ ಆಗಲು ನಮ್ಮ ಸಮುದಾಯದ ಪರಿಶ್ರಮವಿದೆ. ಹಾಗಾಗಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು. 24 ಗಂಟೆಯಲ್ಲಿ ಸಿಎಂ ಯಡಿಯೂರಪ್ಪ ನಮ್ಮ ಸಮುದಾಯಕ್ಕೆ 2A ಮೀಸಲಾತಿ ನೀಡಬೇಕು. ಮೀಸಲಾತಿ ನೀಡದಿದ್ದರೆ ನಮ್ಮ ಸಮುದಾಯದ ವೈರತ್ವ ಕಟ್ಟಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಗಣ್ಯಾತಿಗಣ್ಯ ಮಠಾಧೀಶರು ಯಡಿಯೂರಪ್ಪ ಪರ ನಿಂತಿದ್ದಾರೆ. ವ್ಯಕ್ತಿಪೂಜೆ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಒಂದು ವೇಳೆ ಸಿಎಂ ಬದಲಾವಣೆ ಮಾಡಿದರೆ ನಮ್ಮಲ್ಲಿ ಇನ್ನೂ ಒಳ್ಳೆಯ ನಾಯಕರಿದ್ದಾರೆ. ನಮ್ಮಲ್ಲಿರುವ ನಾಯಕರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...