ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿದೆ. ಆದರೆ ಮೊನ್ನೆಗಿಂತ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ ನೂರಕ್ಕು ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. 24ಗಂಟೆಯಲ್ಲಿ 120 ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ದೃಢಪಟ್ಟಿದೆ.
ದೇಶದಲ್ಲಿ ಈವರೆಗೆ 531892 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಕೋವಿಡ್ ಸಕ್ರಿಯ ಪ್ರಕರಣಗಳು ಕೂಡ ಕಡಿಮೆಯಾಗಿದ್ದು, ದೇಶದಲ್ಲಿ 2148 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 44459040 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 469 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,31,715 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 80,912 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.