alex Certify BIG NEWS: 24 ಗಂಟೆಯಲ್ಲಿ 62,224 ಜನರಲ್ಲಿ ಕೊರೊನಾ ಪಾಸಿಟಿವ್; ಒಂದೇ ದಿನದಲ್ಲಿ 28,00,458 ಜನರಿಗೆ ವ್ಯಾಕ್ಸಿನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ 62,224 ಜನರಲ್ಲಿ ಕೊರೊನಾ ಪಾಸಿಟಿವ್; ಒಂದೇ ದಿನದಲ್ಲಿ 28,00,458 ಜನರಿಗೆ ವ್ಯಾಕ್ಸಿನ್

ನವದೆಹಲಿ: ಕೊರೊನಾ ಎರಡನೇ ಅಲೆ ಅಟ್ಟಹಾಸಕ್ಕೆ ಕೊಂಚ ಬ್ರೇಕ್ ಬಿದ್ದಿದ್ದು, ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ಆದರೆ ನಿನ್ನೆಗಿಂತ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 62,224 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,96,33,105ಕ್ಕೆ ಏರಿಕೆಯಾಗಿದೆ.

ಸಾವಿನ ಸಂಖ್ಯೆಯಲ್ಲೀ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2542 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,79,573ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 8,65,432 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,83,88,100 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,07,628 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 26,19,72,014 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...