ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಪಂಚಮಸಾಲಿ ಸಮುದಾಯದ ಮೀಸಲಾತಿ ಕೂಗು ಮತ್ತೆ ಜೋರಾಗಿದ್ದು, ಸೆ.15ರೊಳಗೆ ಬೇಡಿಕೆ ಈಡೇರಿಸದಿದ್ದರೆ ಸತ್ಯಾಗ್ರಹ ನಡೆಸಲಾಗುವುದು ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಂಚಮಸಾಲಿ ಶ್ರಿಗಳು, ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ನೀಡಲಾಗಿದ್ದ ಭರವಸೆಯನ್ನು ಬೊಮ್ಮಾಯಿ ಸರ್ಕಾರ ಈಡೇರಿಸಬೇಕು. ಸೆಪ್ಟೆಂಬರ್ 15ರೊಳಗೆ ಮೀಸಲಾತಿ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.
ದಿನಕ್ಕೊಂದು ಪಿಂಟ್ ಬಿಯರ್ ಆರೋಗ್ಯಕ್ಕೆ ಒಳ್ಳೇದಂತೆ…..!
ಮೀಸಲಾತಿ ಹೋರಾಟದ ಭಾಗವಾಗಿ ಆಗಸ್ಟ್ 15ರಿಂದ ಸೆ.30ರವರೆಗೆ ರಾಜ್ಯಾದ್ಯಂತ ಅಭಿಯಾನ ಆರಂಭಿಸುತ್ತೇವೆ. ಪಂಚಮಸಾಲಿ ಪ್ರತಿಜ್ನಾ ಪಂಚಾಯತ್ ಎಂಬ ಧ್ಯೇಯ ವಾಕ್ಯದಡಿ ಚಾಮರಾಜನಗರ ಜಿಲ್ಲೆ ಮಲೈಮಹದೇಶ್ವರ ಬೆಟ್ಟದಿಂದ ಅಭಿಯಾನ ಆರಂಭಿಸುತ್ತೇವೆ. ಪ್ರತಿ ತಾಲೂಕಿನಲ್ಲಿ ಜಾಗೃತಿ ಕಾರ್ಯಕ್ರಮ ಮಾಡುತ್ತೇವೆ. ಒಂದು ವೇಳೆ ಕೊಟ್ಟ ಮಾತಿನಂತೆ ಸೆ.15ರೊಳಗೆ ಭರವಸೆ ಈಡೇರಿಸದಿದ್ದರೆ ಅಕ್ಟೋಬರ್ 1ರಂದು ಜೆ.ಹೆಚ್.ಪಟೇಲ್ ಜಯಂತಿಯಂದು ಸತ್ಯಾಗ್ರಹ ಆರಂಭಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.
ನಾವು ಸಿಎಂ ಹುದ್ದೆ, ಸಚಿವ ಸ್ಥಾನ ಕೇಳುತ್ತಿಲ್ಲ, ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ಕೇಳುತ್ತಿದ್ದೇವೆ ಎಂದು ಹೇಳುವ ಮೂಲಕ ಹೊರಾಟದ ಎಚ್ಚರಿಕೆ ನೀಡುವುದರೊಂದಿಗೆ ರಾಜ್ಯ ಸರ್ಕಾರಕ್ಕೆ ಮೀಸಲಾತಿ ವಿಚಾರ ಮತ್ತೆ ನೆನಪಿಸಿದ್ದಾರೆ.