ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2D ಮೀಸಲಾತಿ ಘೋಷಣೆ ವಿಚಾರವಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿನಯ್ ಕುಲಕರ್ಣಿ, ಪಂಚಮಸಾಲಿ ಸಮುದಾಯಕ್ಕೆ 2D ಮೀಸಲಾತಿ ಘೋಷಿಸಿದ್ದಾರೆ. ಇದರಿಂದ ಏನು ಪ್ರಯೋಜನ? ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ನಾವ್ಯಾರೂ 2D ಮೀಸಲಾತಿ ಕೇಳಿರಲಿಲ್ಲ. ಪಂಚಮಸಾಲಿ ಸಮುದಾಯಕ್ಕೆ 17%ರಷ್ಟು ಮೀಸಲಾತಿ ನೀಡಬೇಕು ಎಂದು ಕೇಳಿದ್ದೆವು. ಇನ್ನೊಬ್ಬರ ಮೀಸಲಾತಿ ತೆಗೆದುಕೊಡುವ ಅವಶ್ಯಕತೆ ಇರಲಿಲ್ಲ. ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯಾಗುತ್ತಿದೆ. ಕೇವಲ 2% ಮೀಸಲಾತಿಯಿಂದ ನಮಗೆ ಏನೂ ಸಿಗುವುದಿಲ್ಲ ಎಂದು ಗುಡುಗಿದರು.