ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ದಿನದಂದೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಜಂಟಿ ಪ್ರವೇಶ ಪರೀಕ್ಷೆ- JEE ಕೂಡ ನಡೆಯಲಿದ್ದು, ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದಾರೆ.
ಐಐಟಿಗಳಿಗೆ ಪ್ರವೇಶ ಕಲ್ಪಿಸಲು ಜೆಇಇ ಪರೀಕ್ಷೆ ನಡೆಸಲಾಗುತ್ತದೆ. ಇದೀಗ ಜೆಇಇ ಪರೀಕ್ಷೆ ವೇಳಾ ಪಟ್ಟಿ ಪ್ರಕಟವಾಗಿದ್ದು, ಏಪ್ರಿಲ್ 16ರಿಂದ 21ರವರೆಗೆ ಮುಖ್ಯ ಪರೀಕ್ಷೆ ಮತ್ತು ಮೇ 24 ರಿಂದ 29ರವರೆಗೆ ಎರಡನೇ ಹಂತದ ಪರೀಕ್ಷೆಗಳು ನಡೆಯಲಿದೆ ಎಂದು ಎನ್ ಟಿ ಎ ತಿಳಿಸಿದೆ.
ಈಗಾಗಲೇ ಪದವಿ ಪೂರ್ವ ಶಿಕ್ಷಣ ಮಂಡಳಿ ದ್ವಿತೀಯ ಪಿಯು ಪರೀಕ್ಷಾ ವೇಳಾ ಪಟ್ಟಿ ಪ್ರಕಟಿಸಿದ್ದು, ಏಪ್ರಿಲ್ 16ರಿಂದ ಮೇ 6ರವರೆಗೆ ದ್ವಿತೀಯ ಪಿಯು ಪರೀಕ್ಷೆಗಳು ನಡೆಯುತ್ತಿವೆ. ಇದೀಗ ಇದೇ ಸಂದರ್ಭದಲ್ಲಿ ಜೆಇಇ ಮುಖ್ಯ ಪರೀಕ್ಷೆ ನಿಗದಿಯಾಗಿರುವುದು ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ.