ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.74.64 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ಉಡುಪಿ ದ್ವಿತೀಯ ಸ್ಥಾನ, ಕೊಡಗು ಜಿಲ್ಲೆ 3ನೇ ಸ್ಥಾನ ಹಾಗೂ ಉತ್ತರ ಕನ್ನಡ ಜಿಲ್ಲೆ 4ನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೇ ಸ್ಥಾನದಲ್ಲಿದೆ.
* ಕಲಾ ವಿಭಾಗದಲ್ಲಿ ಬೆಂಗಳೂರಿನ ಜಯನಗರದ NMKRV ಕಾಲೇಜು ವಿದ್ಯಾರ್ಥಿನಿ ತಬ್ಸುಮ್ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು, 600ಕ್ಕೆ 593 ಅಂಕಗಳನ್ನು ಪಡೆದಿದ್ದಾರೆ.
* ವಾಣಿಜ್ಯ ವಿಭಾಗದಲ್ಲಿ ಮೂಡಬಿದರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂದಿದ್ದು, 600ಕ್ಕೆ 600 ಅಂಕಗಳನ್ನು ಪಡೆದಿದ್ದಾರೆ.
* ವಿಜ್ಞಾನ ವಿಭಾಗದಲ್ಲಿ ಕೋಲಾರದ ಗಂಗೋತ್ರಿ ಕಾಲೇಜಿನ ಕೌಶಿಕ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು 600ಕ್ಕೆ 596 ಅಂಕ ಪಡೆದಿದ್ದಾರೆ.