alex Certify BIG NEWS: 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು; ಸಿಎಂ ಬೊಮ್ಮಾಯಿ ಗೊಂಬೆಯಾಟ ಮುಗಿಯುವ ಹಂತಕ್ಕೆ; ಬಿಜೆಪಿ ರಾಜಕೀಯದಾಟಕ್ಕೆ ಮತ್ತೆ ಚಾಲನೆ; ಸಿಎಂ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಲೇವಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು; ಸಿಎಂ ಬೊಮ್ಮಾಯಿ ಗೊಂಬೆಯಾಟ ಮುಗಿಯುವ ಹಂತಕ್ಕೆ; ಬಿಜೆಪಿ ರಾಜಕೀಯದಾಟಕ್ಕೆ ಮತ್ತೆ ಚಾಲನೆ; ಸಿಎಂ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಲೇವಡಿ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಕುರಿತ ವದಂತಿ ಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕಾಲೆಳೆದಿದ್ದು, ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ! 40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ! ಎಂದು ಲೇವಡಿ ಮಾಡಿದೆ.

ಸಿಎಂ ಬೊಮ್ಮಾಯಿ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ. ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ ಬೊಮ್ಮಾಯಿ ಅವರನ್ನ ಕೇಶವ ಕೃಪಾದವರು ‘ಸಂಘಪರಿವಾರಿ’ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ! ಆಡಿಸಿ ನೋಡು ಎಂದು ಗೊಂಬೆಯಂತಿದ್ದ PuppetCM ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್! ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ರಾಜ್ಯ ಬಿಜೆಪಿ ಸಂಪ್ರದಾಯಕ್ಕೋ? ಎಂದು ಪ್ರಶ್ನಿಸಿದೆ.

ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ ‘ಕತ್ತಿ ವರಸೆ’ ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ.

ಬೊಮ್ಮಾಯಿ ಅವರೇ, ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ BJPvsBJP ಕಾದಾಟವೇ? ಅಥವಾ ಯಡಿಯೂರಪ್ಪನವರ ಕೋಪವೇ? ಎಂದು ಸರಣಿ ಟ್ವೀಟ್ ಮೂಲಕ ಕೇಳಿದೆ.

ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ. ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಧಿಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು ಬಿಜೆಪಿ ಪಕ್ಷ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ. ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ ಎಂದು ವಾಗ್ದಾಳಿ ನಡೆಸಿದೆ.

‘https://twitter.com/INCKarnataka/status/1556917444819955713?t=wmdsc6MSoenfTj1x_h-fbg&s=08

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...