ಹೈದರಾಬಾದ್: ಆಂಧ್ರಪ್ರದೇಶಕ್ಕೆ ಮೂರು ನಗರಗಳನ್ನು ರಾಜಧಾನಿಯನ್ನಾಗಿ ಮಾಡುವ ಉದ್ದೇಶ ಹೊಂದಿದ್ದ ಸಿಎಂ ಜಗನ್ ಮೋಹನ್ ರೆಡ್ಡಿಗೆ ಹಿನ್ನಡೆಯಾಗಿದ್ದು, ಅಮರಾವತಿಯೊಂದೇ ಆಂಧ್ರದ ರಾಜಧಾನಿ ಎಂದು ಆಂಧ್ರ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.
ಯಾವುದೇ ಒಂದು ರಾಜ್ಯಕ್ಕೆ ಮೂರು ರಾಜಧಾನಿಗಳಿರಲು ಸಾಧ್ಯವಿಲ್ಲ. ಅಮರಾವತಿ ಮಾತ್ರ ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸಬೇಕು ಹಾಗೂ ಯಾವ ಕಚೇರಿಯನ್ನು ಬೇರೆಡೆ ಸ್ಥಳಾಂತರಿಸುವಂತಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೇ ಪ್ರಕರಣದ ಎಲ್ಲಾ ಅರ್ಜಿದಾರರಿಗೆ 50,000 ರೂಪಾಯಿ ಪಾವತಿಸುವಂತೆ ಸೂಚಿಸಿದೆ.
ಅಮರಾವತಿಯನ್ನು ಶಾಸಕಾಂಗ ರಾಜಧಾನಿಯನ್ನಾಗಿ, ವಿಶಾಖಪಟ್ಟಣಂ ಕಾರ್ಯಾಂಗ ರಾಜಧಾನಿ ಹಾಗೂ ಕರ್ನೂಲ್ ನ್ನು ನ್ಯಾಯಾಂಗ ರಾಜಧಾನಿಯನ್ನಾಗಿ ಮಾಡಬೇಕು ಎಂದು ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದ ಹೆಬ್ಬಯಕೆಯಾಗಿತ್ತು.