ಬೆಂಗಳೂರು: ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾಗಿರುವ ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಸೇರಿದಂತೆ ಇತರ ಕಾರ್ಮಿಕ ವರ್ಗದವರಿಗೆ ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವ ಕಾರ್ಯಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಡಿಬಿಟಿ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ಹಣ ವರ್ಗಾವಣೆ ಮಾಡಿದರು. ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗೆ ತಲಾ 3,000 ರೂಪಾಯಿ ಹಾಗೂ ಅಸಂಘಟಿತ ಕಾರ್ಮಿಕರಿಗೆ ತಲಾ 2,000 ರೂಪಾಯಿ ಪರಿಹಾರ ಧನವನ್ನು ವಿತರಿಸಲಾಯಿತು.
ಒಟ್ಟು 3.5 ಲಕ್ಷ ಕಾರ್ಮಿಕರಿಗೆ ಡಿಬಿಟಿ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಲಾಗಿದೆ.