ರಾಜ ಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಿದವರಿಗೆ ಬೆಂಗಳೂರು ಮಹಾನಗರ ಪಾಲಿಕೆ ಬಿಸಿ ಮುಟ್ಟಿಸುತ್ತಿದ್ದು, ಕಳೆದ ಮೂರು ದಿನಗಳಿಂದ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದೆ.
ನಾಲ್ಕನೇ ದಿನವಾದ ಇಂದೂ ಕೂಡ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆದಿದ್ದು, ಯಲಹಂಕದಲ್ಲಿ ಜೆಸಿಬಿ ಗಳು ಗರ್ಜಿಸಲಿವೆ. ಇದರ ಮಧ್ಯೆ ಜನಸಾಮಾನ್ಯರನ್ನು ಮಾತ್ರ ಕಾರ್ಯಾಚರಣೆಗೆ ಗುರಿಯಾಗಿಸಿಕೊಳ್ಳಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ
ಪ್ರಭಾವಿಗಳಿಗೆ ಸೇರಿದ ಕಟ್ಟಡ ತೆರವುಗೊಳಿಸಲು ಮೀನಾಮೇಷ ಎಣಿಸಲಾಗುತ್ತಿದ್ದು, ಕೇವಲ ಕಾಟಾಚಾರದ ಕಾರ್ಯಾಚರಣೆ ನಡೆದಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.