ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿರುವ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ರಾಜ್ಯಕ್ಕೆ ಭೇಟಿ ನೀಡಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಾಯಕರ ವಾಕ್ಸಮರಕ್ಕೆ ವೇದಿಕೆಯಾಗಿದೆ.
ರಾಜ್ಯ ಸರ್ಕಾರದಲ್ಲಿನ ಸಚಿವ ಭ್ರಷ್ಟಾಚಾರ, 40% ಕಮಿಷನ್ ಆರೋಪಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದ ಜನತೆಗೆ ಉತ್ತರ ನೀಡಲಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಆಗ್ರಹಿಸಿದ್ದಾರೆ.
ʼಪ್ರಯಾಣʼ ಮಾಡುವಾಗ ವಾಂತಿ ಮಾಡಿಕೊಳ್ಳುವವರಿಗೆ ಇಲ್ಲಿದೆ ಟಿಪ್ಸ್
ಕುಮಾರಕೃಪಾ ಅತಿಥಿ ಗೃಹದಲ್ಲಿ ಮಾತನಾಡಿದ ಸುರ್ಜೇವಾಲಾ, ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿರುವ ಸಚಿವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಕೋರ್ಟ್ ನಿಂದ ಸಮನ್ಸ್ ಕೂಡ ಜಾರಿಯಾಗಿದೆ. ಆದರೆ ಬೇಲ್ ಪಡೆದು ಹೊರಗಿದ್ದಾರೆ. ಭ್ರಷ್ಟ ಸಚಿವರನ್ನು ಸಂಪುಟದಿಂದ ವಜಾ ಮಾಡಲಿ ಎಂದು ಒತ್ತಾಯಿಸಿದರು.
ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿಗಳಿಗೂ ಸಮನ್ಸ್ ಜಾರಿಯಾಗಿದೆ. ರಾಜ್ಯದಲ್ಲಿ ಟೆಂಡರ್ ಮಾಫಿಯಾ, ಕಮಿಷನ್ ದಂಧೆಗಳು ಎಗ್ಗಿಲ್ಲದೇ ಸಾಗಿವೆ. ಸಚಿವರುಗಳೇ 40% ಕಮಿಷನ್ ಪಡೆಯುತ್ತಿದ್ದಾರೆ. ಈ ಎಲ್ಲದರ ಬಗ್ಗೆ ಗೃಹ ಸಚಿವ ಅಮಿತ್ ಶಾ ಉತ್ತರವನ್ನು ನೀಡಲಿ ಎಂದು ಹೇಳಿದರು.