ಬೆಂಗಳೂರು: 5 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ ಎಂಬ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿರುವ ಸಚಿವ ಎಂ.ಬಿ.ಪಾಟೀಲ್, ವರಿಷ್ಠರು ಹೇಳಿದ್ದನ್ನೇ ನಾನು ಹೇಳಿದ್ದೇನೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ಪವರ್ ಶೇರಿಂಗ್ ಇಲ್ಲ, ಅದು ಜನರ ಜೊತೆಗೆ ಮಾತ್ರ ಎಂದು ವರಿಷ್ಠರು ಹೇಳಿದ್ದರು. ಅದನ್ನೇ ನಾನು ಹೇಳಿದ್ದೇನೆ. ಅಂದು ವೇಣುಗೋಪಾಲ್ ಅವರು ಸುದ್ದಿಗೋಷ್ಠಿಯಲ್ಲಿ ಏನು ಹೇಳಿದ್ದರು ಅದನ್ನೇ ನಾನು ಹೇಳಿದ್ದೇನೆ. ನಾನು ವೈಯಕಿಕವಾಗಿ ಮಾತನಾಡಿಲ್ಲ, ಇದರಲ್ಲಿ ನನ್ನದು ಯಾವುದೇ ಹೇಳಿಕೆ ಇಲ್ಲ ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಮುಂದುವರೆಯುತ್ತಾರೆ ಎಂದು ಹೇಳಿದ್ದರು. ನಾನು ಕೂಡ ಅದನ್ನೇ ಹೇಳಿದ್ದೇನೆ ಎಂದು ಸ್ಪಷ್ಟನೆ ನೀಡಿದರು.