ಬೆಂಗಳೂರು: ಶೀಘ್ರದಲ್ಲಿಯೇ 5,000 ಕಾನ್ಸ್ ಟೇಬಲ್ ಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಪ್ರೀತಂ ಗೌಡ ಪೊಲೀಸ್ ಕಾನ್ಸ್ ಟೇಬಲ್ ಗಳ ನೇಮಕಾತಿ ವಿಳಂಬದ ಬಗ್ಗೆ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಗೃಹ ಸಚಿವರು, 9432 ಪೊಲೀಸ್ ಕಾನ್ಸ್ ಟೇಬಲ್ ಗಳ ಹುದ್ದೆ ಖಾಲಿ ಇದೆ. ಈಗಾಗಲೇ 3500 ಕಾನ್ಸ್ ಟೇಬಲ್ ಗಳ ನೇಮಕಾತಿಗೆ ನೋಟಿಫಿಕೇಷನ್ ಆಗಿದೆ. ಶೀಘ್ರವೇ ಮತ್ತೆ 5 ಸಾವಿರ ಕಾನ್ಸ್ ಟೇಬಲ್ ಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕೋವಿಡ್ ಕಾರಣದಿಂದ ಕಾನ್ಸ್ ಟೇಬಲ್ ಗಳ ನೇಮಕಾತಿ ವಿಳಂಬ ಆಗಿದೆ ಹೊರತು ಕೋವಿಡ್ ಸಂದರ್ಭದಲ್ಲಿ ನೇಮಕಾತಿಯೇ ನಡೆದಿಲ್ಲ ಎಂಬುದು ತಪ್ಪು ಎಂದರು.