ಬೆಂಗಳೂರು: 58 ನಗರ-ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದ್ದು, ಡಿಸೆಂಬರ್ 27ರಂದು ಮತದಾನ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಘೋಷಣೆ ಮಾಡಿದೆ.
ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದ ಹಿನ್ನೆಲೆಯಲ್ಲಿ ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ.
5 ನಗರಸಭೆ, 19 ಪುರಸಭೆ, 34 ಪ.ಪಂಚಾಯತ್, ಸ್ಥಳೀಯ ಸಂಸ್ಥೆಗಳ 1185 ವಾರ್ಡ್ ಗಳಿಗೆ ಡಿಸೆಂಬರ್ 27ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಡಿಸೆಂಬರ್ 15 ಕೊನೇ ದಿನವಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಡಿ.18 ಕೊನೆ ದಿನ.