ಬೆಂಗಳೂರು: ರಾಜ್ಯದ ಪ್ರಮುಖ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದು ಮಾಡಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಆದೇಶ ಹೊರಡಿಸಿದೆ.
ಅಲ್ಫಾ ಕಾಲೇಜ್ ಆಫ್ ಎಂಜಿನಿಯರಿಂಗ್ ಬೆಂಗಳೂರು, ಶೇಖ್ ಕಾಲೇಜ್ ಆಫ್ ಎಂಜಿನಿಯರಿಂಗ್ ಬೆಳಗಾವಿ, ಇಸ್ಲಾಮಿಯಾ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ ಬೆಂಗಳೂರು, ಏಕಲವ್ಯ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಚಾಮರಾಜನಗರ, ಶ್ರೀ ವಿನಾಯಕ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕೆಜಿಎಫ್, ಬಿಟಿಎಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ ಮೆಂಟ್ ಬೆಂಗಳೂರು ಈ ಕಾಲೇಜುಗಳ ಮಾನ್ಯತೆ ರದ್ದು ಮಾಡಲಾಗಿದೆ.
2021-22ನೇ ಸಾಲಿನಿಂದ ಈ ಮೇಲಿನ ಎಂಜಿನಿಯರಿಂಗ್ ಕಾಲೇಜುಗಳು ಮುಚ್ಚಲ್ಪಡುತ್ತವೆ. ವಿದ್ಯಾರ್ಥಿಗಳಿಗೆ ಬೇರೆ ಕಾಲೇಜುಗಳಲ್ಲಿ ಪ್ರವೇಶ ನೀಡಲಾಗುವುದು ಎಂದು ವಿಟಿಯು ಸ್ಪಷ್ಟಪಡಿಸಿದೆ.