alex Certify BIG NEWS : ನಾಮಫಲಕದಲ್ಲಿ 60% ʻಕನ್ನಡʼಕ್ಕೆ ಸುಗ್ರೀವಾಜ್ಞೆ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಾಮಫಲಕದಲ್ಲಿ 60% ʻಕನ್ನಡʼಕ್ಕೆ ಸುಗ್ರೀವಾಜ್ಞೆ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು : ರಾಜ್ಯಾದ್ಯಂತ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸುವುದನ್ನು ಕಡ್ಡಾಯಗೊಳಿಸುವ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿ ಎಲ್ಲಾ ರೀತಿಯ ನಾಮಫಲಕಗಳ ಮೇಲ್ಬಾಗದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿ ಬಳಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಅಧ್ಯಕ್ಷತೆಯಲ್ಲಿ ಉನ್ನತ್ತ ಮಟ್ಟದ ಸಭೆಯಲ್ಲಿ ತಿಳಿಸಿದ್ದರು.

ಸುಗ್ರೀವಾಜ್ಞೆ ಮೂಲಕ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಜಾರಿ ಮಾಡಲಾಗಿದ್ದು, ತಿದ್ದು ಪಡಿ ಕಾನೂನು ಅನ್ವಯ 2024ರ ಫೆಬ್ರುವರಿ 28ರ ಒಳಗಾಗಿ ನಾಮಫಲಕಗಳಲ್ಲಿ ಕಡ್ಡಾಯ ವಾಗಿ ಶೇ.60 ಕನ್ನಡವಿರಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿನ ಎಲ್ಲಾ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರ, ಆಸ್ಪತ್ರೆ, ಪ್ರಯೋಗಾಲಯ, ಮನರಂಜನಾ ಕೇಂದ್ರ ಮತ್ತು ಹೋಟೆಲ್ ಮುಂತಾದವುಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡಬೇಕು. ಉಳಿದ ಶೇ.40ರಷ್ಟು ಜಾಗದಲ್ಲಿ ಮಾತ್ರ ಇತರೆ ಭಾಷೆ ಇರಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...