ನವದೆಹಲಿ: ದೇಶಾದ್ಯಂತ 670 ಕ್ಕೂ ಹೆಚ್ಚು ಪ್ರಯಾಣಿಕರ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಕಲ್ಲಿದ್ದಲು ಸಾಗಿಸುವ ರೈಲುಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪ್ರಯಾಣಿಕರ ರೈಲು ಸಂಚಾರವನ್ನು ರದ್ದುಗೊಳಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.
ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಕಲ್ಲಿದ್ದಲು ಹೊತ್ತ ರೈಲುಗಳ ಸಾಗಾಟ ಸುಗಮವಾಗಿಸಲು ತಾತ್ಕಾಲಿಕವಾಗಿ 670ಕ್ಕೂ ಹೆಚ್ಚು ಪ್ರಯಾಣಿಕರ ರೈಲು ರದ್ದುಗೊಳಿಸಲಾಗಿದೆ.
ಮೇ 24ರವರೆಗೆ ಪ್ರತಿದಿನ 16 ಮೇಲ್-ಎಕ್ಸ್ ಪ್ರೆಸ್ ರೈಲುಗಳನ್ನು ಹಾಗೂ ಪ್ಯಾಸೆಂಜರ್ ರೈಲುಗಳನ್ನು ರದ್ದು ಮಾಡಲಾಗಿದೆ ಎಂದು ರೈಲ್ವೆ ಕಾರ್ಯನಿರ್ವಾಹಕ ನಿರ್ದೇಶಕ ಕೃಷ್ಣ ಬನ್ಸಾಲ್ ಮಾಹಿತಿ ನೀಡಿದ್ದಾರೆ.