ಬೆಂಗಳೂರು: ಮಾದಕ ವಸ್ತುಗಳ ಮೇಲೆ ಸಮರ ಸಾರಿರುವ ಸಿಸಿಬಿ ಪೊಲೀಸರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 7 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ವಿವಿಪುರಂ ನಲ್ಲಿ ವಿದೇಶಿ ಡ್ರಗ್ ಪೆಡ್ಲರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಲಾರೆನ್ಸ್ ಹಾಗೂ ಚುಕ್ವೂನೇಜಿಮ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 7 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.
1.85 ಕೆಜಿ ಬಿಳಿ ಮೀಥೈಲ್ ಎಡಿಯಾಕ್ಸಿ ಮೆಥಾಂಪೆಟಮೈನ್ -ವೈ ಟ್ ಎಂಡಿಎಂಎ, 1 ಕೆಜಿ ಕಂದು ಮೀಥೈಲ್ ಎಡಿಯಾಕ್ಸಿ ಮೆಥಾಂಪೆಟಮೈನ್, 310 ಗ್ರಾಂ ಕೊಕೇನ್ ಜಪ್ತಿ ಮಾಡಲಾಗಿದೆ. ಬಂಧಿತರು ಸಾಫ್ಟ್ ವೇರ್ ಇಂಜಿನಿಯರ್ಸ್, ಉದ್ಯಮಿಗಳನ್ನು ಟಾರ್ಗೆಟ್ ಮಾಡಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.