ಚಿತ್ರದುರ್ಗ: ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರೈಲು, ರಸ್ತೆ, ಏರ್ ಪೋರ್ಟ್ ನಿರ್ಮಾಣಗಳಿಗೆ ವೇಗ ದೊರೆಯಿತು. ಕರ್ನಾಟಕದಲ್ಲಿ 9 ಕೈಗಾರಿಕಾ ಪ್ರದೇಶ ಸ್ಥಾಪನೆ ಮಾಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕರ್ನಾಟಕದ 9 ಕೈಗಾರಿಕಾ ಪ್ರದೇಶದಲ್ಲಿ ಒಂದು ಚಿತ್ರದುರ್ಗದಲ್ಲಿ ಸ್ಥಾಪನೆಯಾಗಲಿದ್ದು, ಇದರಿಂದ ಯುವಜನತೆಗೆ ಉದ್ಯೋಗಾವಕಾಶಗಳು ದೊರೆಯಲಿವೆ ಎಂದರು.
7 ಸುತ್ತಿನ ಕೋಟೆ ರೀತಿ 7 ಸುರಕ್ಷಾ ಕೋಟೆ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಪಿಎಂ ಆವಾಸ್ ಯೋಜನೆ- ಗ್ಯಾಸ್- ನೀರು, ಪ್ರತಿ ಮನೆಗೂ ರೇಷನ್, ಆಯುಷ್ ಮಾನ್ ಭಾರತ್ ಯೋಜನೆ, ಮುದ್ರಾ ಯೋಜನೆ, ಭೀಮಾ ಯೋಜನೆ, ಮಹಿಳೆಯರ ಸುರಕ್ಷೆ ಹಾಗೂ ಜನಧನ್ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.