ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆದಿದ್ದು, ಸಭೆ ಬಳಿಕ ಮಾತನಾಡಿದ ಗೃಹ ಸಚಿವರು, ನಾನು ಗೃಹ ಸಚಿವನಾದ ಬಳಿಕ ನಡೆಸಿದ 2ನೇ ಸಭೆ ಇದಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು ನಗರ ಪೊಲಿಸರು ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. 2022ರಿಂದ ಇದುವರೆಗೆ 78 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. 68 ವಿದೇಶಿಗರನ್ನು ಗಡಿಪಾರು ಮಾಡಲಾಗಿದೆ. ಹೊಸದಾಗಿ 4 ಸಂಚಾರಿ ಉಪ ವಿಭಾಗಗಳ ರಚನೆ ಮಾಡಲಾಗಿದೆ ಎಂದು ಹೇಳಿದರು.
ಎರಡು ಕಾನೂನು ವ್ಯವಸ್ಥೆ ಉಪ ವಿಭಾಗಗಳನ್ನು ಮಾಡಲಾಗಿದೆ. ಸೇಫ್ ಸಿಟಿ ಪ್ರಾಜೆಕ್ಟ್ ಅಡಿ 4 ಸಾವಿರ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆ ಮಾಡಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕರೆಸಿ ಉದ್ಘಾಟಿಸಲಾಗುವುದು. ಮೊಬೈಲ್ ಫೊರೆನಿಕ್ಸ್ ಲ್ಯಾಬ್ ಮಾಡಿದ್ದೇವೆ. 50 ಜಂಕ್ಷನ್ ಗಳಲ್ಲಿ ಐಟಿಎಂ ಎಸ್ ಹಾಕಲಾಗಿದೆ ಎಂದು ವಿವರಿಸಿದರು.