ಬೆಂಗಳೂರು: 6 ತಿಂಗಳ ಬಳಿಕ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ದಿಢೀರ್ ದೆಹಲಿ ಪ್ರವಾಸ ಕೈಗೊಂಡಿದ್ದು, ಕೆಲ ಅಧಿಕಾರಿಗಳ ಸಹಿತ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು 8 ಜನರ ತಂಡದೊಂದಿಗೆ ದೆಹಲಿಗೆ ಹೊರಟಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಪ್ರತಿಬಾರಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ದೆಹಲಿಗೆ ತೆರಳುತ್ತಿದ್ದ ಸಿಎಂ ಯಡಿಯೂರಪ್ಪ ಈ ಬಾರಿ ಇಬ್ಬರು ಪುತ್ರರು ಹಾಗೂ ಅಧಿಕಾರಿಗಳ ಜೊತೆ ದೆಹಲಿಗೆ ತೆರಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಎಂ ಬಿ.ಎಸ್.ವೈ. ಹಾಗೂ ಬಿ.ವೈ. ವಿಜಯೇಂದ್ರ ವಿರುದ್ಧ ಸ್ವಪಕ್ಷೀಯ ಶಾಸಕರೇ ಪದೇ ಪದೇ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿರುವ ಬೆನ್ನಲ್ಲೇ ಇದೀಗ ಸಿಎಂ ಯಡಿಯೂರಪ್ಪ ಹಾಗೂ ಇಬ್ಬರು ಪುತ್ರರು ದೆಹಲಿಗೆ ಪ್ರಯಾಣ ಬೆಳೆಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.
BREAKING: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್
ಮಧ್ಯಾಹ್ನ 1 ಗಂಟೆಗೆ ಹೆಚ್.ಎ.ಎಲ್ ನಿಂದ ಸಿಎಂ ಬಿಎಸ್ ವೈ ದೆಹಲಿಗೆ ಪ್ರಯಾಣಿಸಲಿದ್ದು, ಬಿಎಸ್ ವೈ ಜೊತೆ ಪ್ರಯಾಣಿಸುತ್ತಿರುವವರ ಪಟ್ಟಿ ಲಭ್ಯವಾಗಿದೆ. ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಬಿ.ವೈ. ರಾಘವೇಂದ್ರ, ಲೆಹರ್ ಸಿಂಗ್, ಶಶಿಧರ್, ಗಿರೀಶ್ ಹೊಸೂರ್, ಸುಧೀರ್ ಕುಮಾರ್ ಸಿಂಗ್ ಸೇರಿದಂತೆ ಒಟ್ಟು 8 ಜನರು ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಸಿಎಂ ಬಿ.ಎಸ್.ವೈ. ದೆಹಲಿ ಭೇಟಿ ಕುತೂಹಲ ಕೆರಳಿಸಿದ್ದು, ರಾಜ್ಯದ ಅಭಿವೃದ್ಧಿ ಕುರಿತ ಚರ್ಚೆಯೇ ಅಥವಾ ತಮ್ಮ ವಿರುದ್ಧದ ಆರೋಪಗಳಿಂದ ಮುಕ್ತವಾಗುವ ನಿಟ್ಟಿನಲ್ಲಿ ಚರ್ಚಿಸಲು ತೆರಳುತ್ತಿದ್ದಾರಾ ಎಂಬುದನ್ನು ಕಾದುನೋಡಬೇಕಿದೆ.