ಬಿಹಾರ : ಇಂದು ಸಂಜೆ 5 ಗಂಟೆಗೆ ನಿತೀಶ್ ಕುಮಾರ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿಯೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳು ಸೇರಿದಂತೆ ಎಂಟು ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಎನ್ಡಿಎಯ ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ನಿತೀಶ್ ಕುಮಾರ್ ಭಾನುವಾರ ಸಂಜೆ ದಾಖಲೆಯ ಒಂಬತ್ತನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿತೀಶ್ ಕುಮಾರ್ ಅವರೊಂದಿಗೆ ಬಿಜೆಪಿ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಅವರು ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 5 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ.
ಉಪ ಮುಖ್ಯಮಂತ್ರಿಗಳು: ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ
ಸಚಿವರು : ಪ್ರೇಮ್ ಕುಮಾರ್, ವಿಜಯ್ ಚೌಧರಿ, ವಿಜೇಂದ್ರ ಯಾದವ್, ಶ್ರವಣ್ ಕುಮಾರ್, ಸಂತೋಷ್ ಕುಮಾರ್ ಮತ್ತು ಸುಮಿತ್ ಸಿಂಗ್
ಗಿರಿರಾಜ್ ಸಿಂಗ್, ರವಿಶಂಕರ್ ಪ್ರಸಾದ್ ಮತ್ತು ಸುಶೀಲ್ ಮೋದಿ ಸೇರಿದಂತೆ ಹಲವಾರು ಉನ್ನತ ಬಿಜೆಪಿ ನಾಯಕರು ಎನ್ಡಿಎಗೆ ಮತ್ತೆ ಸೇರುವ ನಿತೀಶ್ ಕುಮಾರ್ ಅವರ ನಿರ್ಧಾರವನ್ನು ಶ್ಲಾಘಿಸಿದ್ದಾರೆ. ಪ್ರಧಾನಿ ಹುದ್ದೆ ಖಾಲಿ ಇಲ್ಲ ಎಂದು ಬಿಜೆಪಿ ನಾಯಕರು ಕಾಂಗ್ರೆಸ್ ಮತ್ತು ಬಿಜೆಪಿ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಹಾರದಲ್ಲಿ ಹೊಸ ಎನ್ಡಿಎ ಮೈತ್ರಿಕೂಟವು ಲೋಕಸಭಾ ಚುನಾವಣೆಯ ನಂತರ ಆರು ತಿಂಗಳಿಗಿಂತ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಗೆ ಮೊದಲು ನಿತೀಶ್ ಕುಮಾರ್ ಮತ್ತೆ ವಾಪಸ್ ಬರುತ್ತಾರೆ ಎಂದರು.