ಹಿರಿಯ ನಾಗರಿಕರಿಗೆ ಮತದಾನದ ಕೇಂದ್ರಕ್ಕೆ ಬರುವುದು ಕಷ್ಟವಾಗುವುದರಿಂದಾಗಿ ಮತದಾನದಲ್ಲಿ ಇಳಿಕೆಯಾಗುತ್ತಿರುವುದು ಆಗಾಗ ಬೆಳಕಿಗೆ ಬರುತ್ತಲೇ ಇತ್ತು. ಈ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಮಹತ್ತರ ನಿರ್ಧಾರವೊಂದನ್ನು ಕೈಗೊಳ್ಳಲಾಗಿದೆ.
ಚುನಾವಣಾ ಆಯೋಗವು 80 ವರ್ಷ ಮೇಲ್ಪಟ್ಟ ಅಂಗವಿಕಲರು, ಕೊರೊನಾ ಸೋಂಕಿಗೆ ತುತ್ತಾದವರಿಗೆ ಹಾಗೂ ವಯೋವೃದ್ಧರಿಗೆ ಮನೆಯಲ್ಲಿಯೇ ಇದ್ದು ತಮ್ಮ ಹಕ್ಕು ಚಲಾಯಿಸಲು ಅನುಮತಿ ನೀಡಿದೆ.
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್
ಮತದಾರರ ಹಿತ ಕಾಪಾಡುವ ನಿಟ್ಟಿನಲ್ಲಿ ಹಾಗೂ ಹೆಚ್ಚಿನ ಮತದಾನ ನಡೆಯುವಂತೆ ನೋಡಿಕೊಳ್ಳುವುದಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಲು ಸಾಧ್ಯವಾಗದ ಜನರು ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ತಮ್ಮ ಹಕ್ಕು ಚಲಾಯಿಸಬಹುದು ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ 2022ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಪ್ರಸ್ತುತ ಆಡಳಿತದಲ್ಲಿರುವ ಹಾಲಿ ಸರ್ಕಾರದ ಅಧಿಕಾರವಧಿ ಮೇ. 14ರಂದು ಮುಗಿಯಲಿದೆ. ಹೀಗಾಗಿಯೇ ಚುನಾವಣೆ ಆಯೋಗ ಎಲ್ಲ ಜನರೂ ತಮ್ಮ ಹಕ್ಕು ಚಲಾಯಿಸಲಿ ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ಕೆ ಮುಂದಾಗಿದೆ.