alex Certify BIG NEWS : ರಾಜ್ಯದ 219 ಕೇಂದ್ರಗಳಲ್ಲಿ 800 ʻಡಯಾಲಿಸಿಸ್ ಯಂತ್ರ’ಗಳ ಅಳವಡಿಕೆ : ಸಿಎಂ ಸಿದ್ಧರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ 219 ಕೇಂದ್ರಗಳಲ್ಲಿ 800 ʻಡಯಾಲಿಸಿಸ್ ಯಂತ್ರ’ಗಳ ಅಳವಡಿಕೆ : ಸಿಎಂ ಸಿದ್ಧರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿವೆ. 800 ಯಂತ್ರಗಳನ್ನು ಈ ಕೇಂದ್ರಗಳಲ್ಲಿ ಅಳವಡಿಸುವ ಕೆಲಸವಾಗುತ್ತಿದೆ. ಹಿಂದೆ ನಮ್ಮ ಸರ್ಕಾರವಿದ್ದಾಗ ಹಾಗೂ ಈಗಲೂ ಕೂಡ ಸಾಧ್ಯವಾದ ಮಟ್ಟಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿಕೊಡಬೇಕೆಂಬ ಉದ್ದೇಶ ಹೊಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿ ಮಾತನಾಡಿದರು.

ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ  ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು.

ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ.  ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2,000 ರೂ.ಗಳಿಗಿಂತ ಹೆಚ್ಚಿದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗ. ಅದಕ್ಕಾಗಿ ಸರ್ಕಾರ ಬಡವರಿಗೆ ಸಹಾಯಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ.

ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿವೆ. 800 ಯಂತ್ರಗಳನ್ನು ಈ ಕೇಂದ್ರಗಳಲ್ಲಿ ಅಳವಡಿಸುವ ಕೆಲಸವಾಗುತ್ತಿದೆ. ಹಿಂದೆ ನಮ್ಮ ಸರ್ಕಾರವಿದ್ದಾಗ ಹಾಗೂ ಈಗಲೂ ಕೂಡ ಸಾಧ್ಯವಾದ ಮಟ್ಟಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿಕೊಡಬೇಕೆಂಬ ಉದ್ದೇಶ ಹೊಂದಿದ್ದೇವೆ.

ಸಣ್ಣ ವಯಸ್ಸಿನವರಿಗೂ ಕಿಡ್ನಿ ಸಮಸ್ಯೆ ಬರುತ್ತದೆ. ಅದಕ್ಕಾಗಿ ಸರ್ಕಾರ ಎಷ್ಟು ಸಾಧ್ಯವೋ ಅಷ್ಟು ಜನರಿಗೆ ಡಯಾಲಿಸಿಸ್  ಮಾಡಿಸುವ ಕೆಲಸ ಮಾಡುತ್ತಿದೆ. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಈ ಸೇವೆ ದೊರಕಬೇಕು. ಜನರಿಗೆ ಹತ್ತಿರದಲ್ಲಿಯೇ ಈ ಸೇವೆ ಪಡೆಯಬಹುದು.

ಏಕಬಳಕೆ ಮಾಡುವ ಡಯಾಲೈಸರ್ ಗಳನ್ನು ಪರಿಚಯಿಸಲಾಗಿದೆ. ಇದರಿಂದ ಸೋಂಕು ಕಡಿಮೆ ಮಾಡಬಹುದಾಗಿದೆ. ಡಯಾಲಿಸಿಸ್ ಕೇಂದ್ರಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂಅನುದಾನ ಒದಗಿಸಿಕೊಟ್ಟಿದೆ. ರಾಜ್ಯ ಸರ್ಕಾರ ಶೇ.60 ಹಾಗೂ ಕೇಂದ್ರ ಸರ್ಕಾರ ಶೇ.40 ರಷ್ಟು ಅನುದಾನ ನೀಡಲಿದೆ. ಆದರೆ ಹೆಸರು ಮಾತ್ರ ಪ್ರಧಾನಮಂತ್ರಿ ಡಯಾಲಿಸಿಸ್ ಎಂದಿದೆ. ಹೆಚ್ಚಾಗಿ ಅನುದಾನ ಒದಗಿಸುವುದು ರಾಜ್ಯ ಸರ್ಕಾರ ಎಂದರು.

ಡಯಾಲಿಸಿಸ್ ಸೇವೆಯನ್ನು ಹೆಚ್ಚು ಮಾಡುವ ಕೆಲಸ ಮಾಡುತ್ತೇವೆ. ಆರೋಗ್ಯ ಇಲಾಖೆಯನ್ನು ಸಚಿವ ದಿನೇಶ್ ಗುಂಡೂರಾವ್ ಸುಧಾರಣೆ ಮಾಡುತ್ತಾರೆ ಎಂಬ ನಂಬಿಕೆ ಇದೆ.

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಆಗಬೇಕು, ಶವಾಗಾರ, ಅಡುಗೆ ಮನೆ, ಜೈವಿಕ ತ್ಯಾಜ್ಯ ಕೊಠಡಿ, ಮೂಲಭೂತ ಸೌಕರ್ಯಗಳನ್ನು 150 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಇದನ್ನು ಸಚಿವ ಸಂಪುದಲ್ಲಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...