ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 36,652 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 96,08,211ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 512 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,39,700ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 4,09,689 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 90,58,822 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 42,533 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.