ಬೆಳಗಾವಿ : ರಾಜ್ಯದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಭ್ರೂಣ ಪರೀಕ್ಷೆ ಮತ್ತು ಭ್ರೂಣಹತ್ಯೆ ಕುರಿತಂತೆ ನಿಖರ ಮಾಹಿತಿ ನೀಡುವವರಿಗೆ ₹ 1 ಲಕ್ಷ ಬಹುಮಾನ ನೀಡಲಾಗುವುದು ಹಾಗೂ ಮಾಹಿತಿ ನೀಡುವವರ ಗೋಪ್ಯತೆ ಕಾಪಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಟಾಸ್ಕ್ ಪೋರ್ಸ್ ರಚಿಸಲು ನಿರ್ಧರಿಸಲಾಗಿದೆ. ಆಸ್ಪತ್ರೆಗಳು, ಲ್ಯಾಬ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಸೇರಿದಂತೆ ಪ್ರತಿ ಮೂರು ತಿಂಗಳಿಗೊಮ್ಮೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಭ್ರೂಣ ಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯನಿರ್ವಹಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಟಾಸ್ಕ್‌ಫೋರ್ಸ್‌ಗೆ ACP ಅಥವಾ DYSP ಶ್ರೇಣಿಯ ಅಧಿಕಾರಿಯನ್ನು ನೇಮಿಸುವ ಕುರಿತು ಗೃಹ ಇಲಾಖೆಯ ಜೊತೆ ಚರ್ಚೆ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ.