alex Certify BIG NEWS : ರಾಜ್ಯದಲ್ಲಿ ‘ಅಕ್ರಮ ಮದ್ಯ’ ಮಾರಾಟ ತಡೆಗೆ ಕ್ರಮ : ಸಚಿವ ಹೆಚ್.ಕೆ ಪಾಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದಲ್ಲಿ ‘ಅಕ್ರಮ ಮದ್ಯ’ ಮಾರಾಟ ತಡೆಗೆ ಕ್ರಮ : ಸಚಿವ ಹೆಚ್.ಕೆ ಪಾಟೀಲ್

ಬೆಂಗಳೂರು : ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಲು ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ರೂಟ್ಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ. ಗಸ್ತಿನ ಸಮಯದಲ್ಲಿ ಮತ್ತು ಸಾರ್ವಜನಿಕರಿಂದ ವಿಶೇಷವಾಗಿ ಮಹಿಳೆ / ಮಹಿಳಾ ಸಂಘಗಳಿಂದ ದೂರುಗಳು ಸ್ವೀಕೃತವಾದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಸ್ಥಳಗಳ ಮೇಲೆ ದಾಳಿ ನಡೆಸಿ, ಅಕ್ರಮಗಳು ಕಂಡುಬಂದಲ್ಲಿ ಅಬಕಾರಿ ಕಾಯ್ದೆ ಮತ್ತು ನಿಯಮಗಳನುಸಾರ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್ ಕೆ ಪಾಟೀಲ್ ತಿಳಿಸಿದರು.

ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬೈಲಹೊಂಗಲ ಶಾಸಕರಾದ ಕೌಜಲಗಿ ಮಹಾಂತೇಶ್ ಶಿವಾನಂದ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲಾ ಮದ್ಯ ಮಾರಾಟ ಸನ್ನದುಗಳನ್ನು ನಿಯಮಿತವಾಗಿ ಮಾಸಿಕವಾಗಿ ಪರಿಶೀಲಿಸಲಾಗುತ್ತಿದ್ದು ಕಾಯ್ದೆ/ನಿಯಮ/ಸನ್ನದು ಷರತ್ತು ಉಲ್ಲಂಘನೆಯಾದಲ್ಲಿ ಅಂತಹ ಸನ್ನದುದಾರರ ವಿರುದ್ಧ ಅಬಕಾರಿ ಕಾಯ್ದೆ ಪ್ರಕರಣ ದಾಖಲಿಸಲಾಗುತ್ತಿದ್ದು, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ರಸ್ತೆಗಾವಲು ನಡೆಸಿ ಸಂಶಯಾಸ್ಪದ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಅಲ್ಲದೇ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ಸಭೆಯನ್ನು ಏರ್ಪಡಿಸಿ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಕ್ರಮ ಹತ್ತಿಕ್ಕಲು ಕ್ರಮ ವಹಿಸಲು ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಸಂರಕ್ಷಣಾಧಿಕಾರಿಗಳೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಗ್ರಾಮ ಸಭೆಗಳಲ್ಲಿ ಮತ್ತು ವಿದ್ಯಾರ್ಥಿಗಳಿಗೆ ಶಾಲಾ/ಕಾಲೇಜುಗಳಲ್ಲಿ ಮದ್ಯ ವ್ಯಸನ ಮತ್ತು ಮಾದಕ ವಸ್ತುಗಳ ಸೇವನೆಯಿಂದ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಆರೋಗ್ಯಕ್ಕೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಕ್ರಮ ವಹಿಸಲಾಗಿದೆ. ಅಲ್ಲದೇ 2024-25ನೇ ಸಾಲಿನ ಜನವರಿ ಅಂತ್ಯದವರೆಗೆ 17,390 ಮೊಕದ್ದಮೆಗಳನ್ನು ದಾಖಲಿಸಿ, ಅದೇ ಅವಧಿಯಲ್ಲಿ 18,253 ಆರೋಪಿತರನ್ನು ದಸ್ತಗಿರಿಗೊಳಪಡಿಸಲಾಗಿರುತ್ತದೆ ಎಂದು ತಿಳಿಸಿದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...