ಬೆಂಗಳೂರು : ರಾಜ್ಯದಲ್ಲಿ ವೈದ್ಯರು, ನರ್ಸ್ಗಳ ಸುರಕ್ಷತೆಗೆ ಶೀಘ್ರವೇ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಕೋಲ್ಕತ್ತಾದಲ್ಲಿ ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳು ಶನಿವಾರ ಹೊರರೋಗಿ ಸೇವೆ ವಿಭಾಗ (ಒಪಿಡಿ) ಬಂದ್ ಘೋಷಿಸಿವೆ. ಆದರೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ. ರಾಜ್ಯದ ವೈದ್ಯರು ಮತ್ತು ನರ್ಸ್ಗಳ ಸುರಕ್ಷತೆಗೆ ಎಲ್ಲಾ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ಬಗ್ಗೆ ಮುಂದಿನ ವಾರ ವೈದ್ಯಕೀಯ ಸಂಘಟನೆಗಳು ಮತ್ತು ಆಸ್ಪತ್ರೆಗಳ ಮಾಲೀಕರ ಜೊತೆಗೆ ಸಭೆ ನಡೆಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ & ಕೊಲೆ ಪ್ರಕರಣ ಖಂಡಿಸಿ ವೈದ್ಯರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಒಪಿಡಿ ಸೇವೆ ಬಂದ್ ಆಗಿದೆ. ಸಕಾಲಕ್ಕೆ ಚಿಕಿತ್ಸೆ ಸಿಗದೇ ರೋಗಿಗಳು ಪರದಾಡಿದ್ದಾರೆ.