ಬೆಂಗಳೂರು : ‘ವಾಮನ’ ಟ್ರೇಲರ್ ರಿಲೀಸ್ ವೇಳೆ ನಟ ದರ್ಶನ್ ಅಭಿಮಾನಿಗಳು ದಾಂಧಲೆ ನಡೆಸಿದ್ದು, ಥಿಯೇಟರ್ ನ ಗಾಜು, ಕಿಟಕಿ ಒಡೆದು ಹುಚ್ಚಾಟ ಮೆರೆದಿದ್ದಾರೆ.
ನಗರದ ಪ್ರಸನ್ನ ಚಿತ್ರಮಂದಿರದಲ್ಲಿ ಟ್ರೇಲರ್ ಲಾಂಚ್ ಈವೆಂಟ್ ನಡೆಯಿತು. ನಟ ದರ್ಶನ್ ವಾಮನ ಚಿತ್ರದ ಟ್ರೇಲರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ನಟ ದರ್ಶನ್ ಬರುವುದು ತಡವಾದಾಗ ಕುಪಿತಗೊಂಡ ಅಭಿಮಾನಿಗಳು ಥಿಯೇಟರ್ ಕಿಟಕಿ, ಗಾಜು ಒಡೆದು ಹಾನಿ ಮಾಡಿದ್ದಾರೆ. ನಟ ದರ್ಶನ್ ಆಪ್ತ ಧನ್ವೀರ್ ಗೌಡ ನಟನೆಯ ವಾಮನ ಸಿನಿಮಾದ ಟ್ರೇಲರ್ ರಿಲೀಸ್ ವೇಳೆ ಈ ಘಟನೆ ನಡೆದಿದೆ.
ಆನ್ಲೈನ್ ಮೂಲಕ ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಗಿದ್ದು, ಆ ವಿಡಿಯೋವನ್ನು ‘ಪ್ರಸನ್ನ’ ಚಿತ್ರಮಂದಿರದಲ್ಲಿ ಪ್ರದರ್ಶಿಸಲಾಯಿತು.
ನಮ್ಮ ಪ್ರೀತಿಯ ಹೀರೋ ಧನ್ವೀರ್ ಗೌಡ ‘ವಾಮನ’ನಾಗಿ ಏಪ್ರಿಲ್ ೧೦ ರಿಂದ ನಿಮ್ಮ ಮುಂದೆ ಬರಲು ಸಜ್ಜಾಗಿದ್ದಾರೆ. ಚಿತ್ರದ ಟ್ರೈಲರ್ ಸೊಗಸಾಗಿ ಮೂಡಿಬಂದಿದ್ದು ಜನಮೆಚ್ಚುಗೆ ಗಳಿಸುವಲ್ಲಿ ನಂಬಿಕೆ ಹೆಚ್ಚಾಗಿದೆ. ಕನ್ನಡ ಸಿನಿಪ್ರೇಮಿಗಳ ಪ್ರೋತ್ಸಾಹ ಮತ್ತು ಬೆಂಬಲದಿಂದ ಈ ಚಿತ್ರವು ಎಲ್ಲೆಡೆ ಯಶಸ್ವಿಯಾಗಿ ಅಬ್ಬರಿಸಲಿ ಎಂದು ಆಶಿಸುತ್ತೇನೆ. ಒಳ್ಳೆ ಕನ್ನಡ ಚಿತ್ರಗಳಿಗೆ ನಮ್ಮ ಸೆಲೆಬ್ರಿಟಿಗಳ ಪ್ರೋತ್ಸಾಹ ಎಂದಿನಂತೆ ಸದಾ ಬೆನ್ನೆಲುಬಾಗಿ ನಿಂತರಲಿ ಎಂದು ನಟ ದರ್ಶನ್ ಟ್ವೀಟ್ ಮಾಡಿದ್ದಾರೆ.
ನಮ್ಮ ಪ್ರೀತಿಯ ಹೀರೋ ಧನ್ವೀರ್ ಗೌಡ ‘ವಾಮನ’ನಾಗಿ ಏಪ್ರಿಲ್ ೧೦ ರಿಂದ ನಿಮ್ಮ ಮುಂದೆ ಬರಲು ಸಜ್ಜಾಗಿದ್ದಾರೆ. ಚಿತ್ರದ ಟ್ರೈಲರ್ ಸೊಗಸಾಗಿ ಮೂಡಿಬಂದಿದ್ದು ಜನಮೆಚ್ಚುಗೆ ಗಳಿಸುವಲ್ಲಿ ನಂಬಿಕೆ ಹೆಚ್ಚಾಗಿದೆ. ಕನ್ನಡ ಸಿನಿಪ್ರೇಮಿಗಳ ಪ್ರೋತ್ಸಾಹ ಮತ್ತು ಬೆಂಬಲದಿಂದ ಈ ಚಿತ್ರವು ಎಲ್ಲೆಡೆ ಯಶಸ್ವಿಯಾಗಿ ಅಬ್ಬರಿಸಲಿ ಎಂದು ಆಶಿಸುತ್ತೇನೆ. ಒಳ್ಳೆ ಕನ್ನಡ… pic.twitter.com/7Tr0Kd429x
— Darshan Thoogudeepa (@dasadarshan) March 27, 2025