alex Certify BIG NEWS : ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್’ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಮುಖಾಮುಖಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್’ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಮುಖಾಮುಖಿ.!

ಬೆಂಗಳೂರು : ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಆರೋಪಿ ನಟ ದರ್ಶನ್, ಪವಿತ್ರಾ ಗೌಡ ಹಾಜರಾಗಲಿದ್ದು, ಇಬ್ಬರು ಮುಖಾಮುಖಿಯಾಗಲಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳ ಹಾಜರಾತಿಗೆ ಸೂಚನೆ ಇರುವ ಕಾರಣ ಸಿಸಿಹೆಚ್ 57 ರ ಕೋರ್ಟ್ ನಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಮುಖಾಮುಖಿಯಾಗಲಿದ್ದಾರೆ. ಕೋರ್ಟ್ ಇಬ್ಬರ ಮುಖಾಮುಖಿ ವಿಚಾರಣೆ ನಡೆಸಲಿದೆ.

ಜಾಮೀನು ನೀಡುವ ವೇಳೆ ಕೋರ್ಟ್ ಎಲ್ಲಾ ಆರೋಪಿಗಳು ಕೋರ್ಟ್ ಗೆ ಹಾಜರಾಗುವಂತೆ ಷರತ್ತು ವಿಧಿಸಿತ್ತು, ಅಂತೆಯೇ ಇಂದು ಎಲ್ಲಾ ಆರೋಪಿಗಳು ಕೋರ್ಟ್ ಗೆ ಹಾಜರಾಗಲಿದ್ದಾರೆ.ಇನ್ನೂ, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.ದರ್ಶನ್ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಮನವಿ ಮಾಡಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ 2024ರ ಜೂನ್ 11ರಂದು ದರ್ಶನ್ ಬಂಧಿಸಲಾಗಿತ್ತು. 2024ರ ಅಕ್ಟೋಬರ್ 30ರಂದು ವೈದ್ಯಕೀಯ ಚಿಕಿತ್ಸೆಗಾಗಿ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ನಂತರ 2024ರ ಡಿಸೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ದರ್ಶನ್ ಸೇರಿ 7 ಮಂದಿ ಆರೋಪಿಗಳಿಗೆ ನಿಯಮಿತ ಜಾಮೀನು ಮಂಜೂರು ಮಾಡಿತ್ತು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...