ಬೆಂಗಳೂರು : ರೇವ್ ಪಾರ್ಟಿಯಲ್ಲಿ ನಟಿ ಹೇಮಾ ಭಾಗಿಯಾಗಿದ್ದು ಸತ್ಯ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಫೌರ್ಮ್ ಹೌಸ್ ನಲ್ಲೇ ಇದ್ದು ನಟಿ ಹೇಮಾ ವಿಡಿಯೋ ಮಾಡಿದ್ದಾರೆ, ಯಾವ ಸಂದರ್ಭದಲ್ಲಿ ವಿಡಿಯೊ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೀವಿ ಎಂದು ಹೇಳಿದ್ದಾರೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿಆರ್ ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಪಾರ್ಟಿ ಆಯೋಜಕರು ಸೇರಿ ಐವರನ್ನು ಬಂಧಿಸಲಾಗಿದೆ. ರಾಜಕಾರಣಿಗಳು, ತೆಲುಗು ಚಿತ್ರರಂಗದ ನಟ-ನಟಿಯರು ಈ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂಬ ಮಾತು ಕೇಳಿಬರುತ್ತಿದೆ. ಪ್ರಮುಖವಾಗಿ ಟಾಲಿವುಡ್ ನಟಿ ಹೇಮಾ ಕೂಡ ಇದ್ದರು ಎನ್ನಲಾಗಿದೆ.
ಆದರೆ ಬೆಂಗಳೂರಿನಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ತಾನು ಭಾಗಿಯಾಗಿಲ್ಲ. ನಾನು ಹೈದರಾಬಾದ್ ನ ಫಾರ್ಮ್ ಹೌಸ್ ನಲ್ಲಿಯೇ ಇದ್ದೇನೆ ಎಂದು ಸಾಮಾಜಿಕ ಜಾಲತಾಣಗಲ್ಲಿ ವಿಡಿಯೋ ಶೇರ್ ಮಡುವ ಮೂಲಕ ಸ್ಪಷ್ಟನೆ ನೀಡಿದ್ದರು. ನಾನು ಎಲ್ಲಿಯೂ ಹೋಗಿಲ್ಲ. ಹೈದರಾಬಾದ್ ನ ಫಾರ್ಮ್ ಹೌಸ್ ನಲ್ಲಿ ಆರಾಮವಾಗಿದ್ದೇನೆ. ರೇವ್ ಪಾರ್ಟಿಯಲ್ಲಿ ನಾನು ಭಾಗಿಯಾಗಿದ್ದೇನೆ ಎಂಬ ಸುದ್ದಿ ಫೇಕ್ ಸುದ್ದಿ ಎಂದು ಸ್ಪಷ್ಟಪಡಿಸಿದ್ದರು. ಆದರೀಗ ರೇವ್ ಪಾರ್ಟಿಯಲ್ಲಿ ನಟಿ ಹೇಮಾ ಭಾಗಿಯಾಗಿದ್ದು ಸತ್ಯ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸ್ಪಷ್ಟನೆ ನೀಡಿದ್ದಾರೆ.