alex Certify BIG NEWS : ನಟಿ ‘ರಶ್ಮಿಕಾ ಮಂದಣ್ಣ’ ಮತ್ತೊಂದು ಡೀಪ್ ಫೇಕ್ ವಿಡಿಯೋ ವೈರಲ್ |Deep Fake Video | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಟಿ ‘ರಶ್ಮಿಕಾ ಮಂದಣ್ಣ’ ಮತ್ತೊಂದು ಡೀಪ್ ಫೇಕ್ ವಿಡಿಯೋ ವೈರಲ್ |Deep Fake Video

ನ್ಯಾಷನಲ್ ಸ್ಟಾರ್ , ಕೊಡಗಿನ ಕುವರಿ ನಟಿ ರಶ್ಮಿಕಾ ಮಂದಣ್ಣಗೆ ಮತ್ತೊಂದು ಡೀಫ್ ಫೇಕ್ ಸಂಕಷ್ಟ ಎದುರಾಗಿದ್ದು, ನಟಿ ‘ರಶ್ಮಿಕಾ ಮಂದಣ್ಣ’ ಮತ್ತೊಂದು ಡೀಪ್ ಫೇಕ್ ವಿಡಿಯೋ ವೈರಲ್ ಆಗಿದೆ.

ಹೌದು, ನಟಿ ‘ರಶ್ಮಿಕಾ ಮಂದಣ್ಣ’ ಅವರ ಮತ್ತೊಂದು ಡೀಪ್ ಫೇಕ್ ವಿಡಿಯೋ ಹರಿದಾಡುತ್ತಿದೆ. ಈ ಮೊದಲು ಬ್ಲಾಕ್ ಔಟ್ ಫಿಟ್ನಲ್ಲಿ ರಶ್ಮಿಕಾ ಡ್ಯಾನ್ಸ್ ಮಾಡೋ ರೀತಿ ಫೇಕ್ ಮಾಡಿ ವೈರಲ್ ಮಾಡಲಾಗಿತ್ತು. ನಂತರ ಕಿಡಿಗೇಡಿಗಳು ಮತ್ತೆರಡು ಡೀಪ್ ಫೇಕ್ ವಿಡಿಯೋ ಸೃಷ್ಟಿಸಿ ಹರಿಬಿಟ್ಟಿದ್ದರು. ಅಲ್ಲದೇ ಪ್ರಕರಣ ಸಂಬಂಧ ಆರೋಪಿಗಳನ್ನು ಕೂಡ ಬಂಧಿಸಲಾಗಿತ್ತು. ಈ ಬೆನ್ನಲ್ಲೇ ಇದೀಗ ನಟಿ ‘ರಶ್ಮಿಕಾ ಮಂದಣ್ಣ’ ಮತ್ತೊಂದು ಡೀಪ್ ಫೇಕ್ ವಿಡಿಯೋ ವೈರಲ್ ಆಗಿದೆ.

ಈ ಮೊದಲು ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವೀಡಿಯೊ ಇತ್ತೀಚೆಗೆ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ತಂತ್ರಜ್ಞಾನದ ದುರುಪಯೋಗದ ಬಗ್ಗೆ ಅಂತರ್ಜಾಲದಲ್ಲಿ ಭಾರಿ ಚರ್ಚೆ ನಡೆದಿತ್ತು, ನಟ ಅಮಿತಾಬ್ ಬಚ್ಚನ್ ಸೇರಿದಂತೆ ಹಲವರು ಇದನ್ನು ಖಂಡಿಸಿದ್ದರು. ಇದೀಗ ವೈರಲ್ ಆದ ವಿಡಿಯೋದಲ್ಲಿ ಬೇರೆ ಮಹಿಳೆಯ ಮುಖವನ್ನು ರಶ್ಮಿಕಾ ಮಂದಣ್ಣ ಅವರ ಮುಖವಾಗಿ ಮಾರ್ಫಿಂಗ್ ಮಾಡಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...