![](https://kannadadunia.com/wp-content/uploads/2020/12/Dinesh-Gundurao.jpg)
ಬೆಂಗಳೂರು : ಮಂಡ್ಯ ಜಿಲ್ಲೆ ಬಳಿಕ ಈಗ ವಿಜಯಪುರದಲ್ಲಿ ಹೆಣ್ಣು ಭ್ರೂಣ ಹತ್ಯೆ ದಂಧೆ ನಡೆಯುತ್ತಿರುವುದು ಕಂಡುಬಂದಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಡ್ಯದ ಬಳಿಕ ವಿಜಯಪುರದಲ್ಲೂ ಹೆಣ್ಣು ಭ್ರೂಣ ಹತ್ಯೆ ದಂಧೆ ಸುಲಭವಾಗಿ ಗೊತ್ತಾಗುವುದಿಲ್ಲ. ದಂಧೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಇನ್ನೂ ಪ್ರಕರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಅವರ ವಿರುದ್ಧ ತನಿಖೆ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಸಾಮಾಜಿಕ ಪಿಡುಗಾಗಿರುವ ಹೆಣ್ಣು ಭ್ರೂಣ ಹತ್ಯೆಯನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕಾರ್ಯೋನ್ಮುಖವಾಗಿದೆ ಎಂದು ಹೇಳಿದ್ದಾರೆ.