alex Certify BIG NEWS: ಪ್ರಮಾಣವಚನದ ಬೆನ್ನಲ್ಲೇ ಇಂದು ಮೋದಿ ಸರ್ಕಾರದ ಮಹತ್ವದ ಪ್ರಥಮ ‘ಸಚಿವ ಸಂಪುಟ’ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಮಾಣವಚನದ ಬೆನ್ನಲ್ಲೇ ಇಂದು ಮೋದಿ ಸರ್ಕಾರದ ಮಹತ್ವದ ಪ್ರಥಮ ‘ಸಚಿವ ಸಂಪುಟ’ ಸಭೆ

ನರೇಂದ್ರ ಮೋದಿಯವರು ಭಾನುವಾರದಂದು ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಂದಿಗೆ 71 ಮಂದಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶ – ವಿದೇಶಗಳ ಗಣ್ಯರ ಸಮ್ಮುಖದಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಬಾಲಿವುಡ್ ಸೆಲೆಬ್ರಿಟಿಗಳೂ ಸಹ ಪಾಲ್ಗೊಂಡಿದ್ದು ವಿಶೇಷ.

ಪ್ರಮಾಣವಚನ ಸ್ವೀಕರಿಸಿದ ಬಳಿಕ ಕೇಂದ್ರ ಸಚಿವರಾಗಿ ಆಯ್ಕೆಯಾಗಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ನೂತನ ಸಚಿವರಿಗೆ ಔತಣಕೂಟ ಏರ್ಪಡಿಸಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮುಂದಿನ ರೂಪುರೇಷೆಗಳ ಕುರಿತು ಅನೌಪಚಾರಿಕ ಮಾತುಕತೆ ನಡೆದಿದೆ ಎನ್ನಲಾಗಿದೆ.

ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೂತನ ಸಚಿವ ಸಂಪುಟದ ಮಹತ್ವದ ಸಭೆ ನಡೆಯಲಿದೆ ಎಂದು ತಿಳಿದು ಬಂದಿದ್ದು, ಈ ಸಂದರ್ಭದಲ್ಲಿ ಮುಂದಿನ 100 ದಿನಗಳ ಕಾಲ ಕೈಗೊಳ್ಳಬೇಕಾದ ಕಾರ್ಯ ಯೋಜನೆಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಇದರ ಜೊತೆಗೆ ನೂತನ ಸಚಿವರಿಗೆ ಹಂಚಿಕೆ ಮಾಡಬೇಕಾದ ಖಾತೆಗಳ ಕುರಿತು ಮೈತ್ರಿಕೂಟದ ಸದಸ್ಯರ ಜೊತೆ ಮಾತುಕತೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...