ನವದೆಹಲಿ: ಅಕ್ಟೋಬರ್ 17ರಂದು ನಡೆಯಲಿರುವ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದ್ದು, ಹಿರಿಯ ನಾಯಕ ಶಶಿ ತರೂರ್ ಕೂಡ ಸ್ಪರ್ಧೆ ಮಾಡಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾಗಿರುವ ಸೋನಿಯಾ ಗಾಂಧಿ ಅವರ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು, ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ನ ಒಂದು ಬಣ ರಾಹುಲ್ ಗಾಂಧಿ ಆಯ್ಕೆಗೆ ಒತ್ತಾಯಿಸಿದ್ದರೆ ಇನ್ನೊಂದು ಬಣ ರಾಹುಲ್ ಗಾಂಧಿ ವಿರುದ್ಧ ಧ್ವನಿಯೆತ್ತಿದೆ.
ಈ ನಡುವೆ ಹಿರಿಯ ನಾಯಕ ಶಶಿ ತರೂರ್ ಮಾಡಿರುವ ಟ್ವೀಟ್ ಗಮನ ಸೆಳೆದಿದೆ. ಎಐಸಿಸಿ ಚುನಾವಣೆಯಲ್ಲಿ ಹಲವರು ಸ್ಪರ್ಧಿಸಬೇಕು. ಚುನಾವಣೆ ನೇರ, ನಿಸ್ಪಕ್ಷಪಾತವಾಗಿ ನಡೆಯಬೇಕು. ಏಕಪಕ್ಷೀಯವಾಗಿ ವ್ಯಕ್ತಿಯ ಆಯ್ಕೆ ಆಗಬಾರದು ಎಂದು ಹೇಳುವ ಮೂಲಕ ತಾನೂ ಕೂಡ ಎಐಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂಬ ಸಂದೇಶ ರವಾನಿಸಿದ್ದಾರೆ. ಈ ನಿಟ್ಟಿನಲ್ಲಿ ಶಶಿ ತರೂರ್ ನಡೆ ಕುತೂಹಲ ಮೂಡಿಸಿದೆ.