![](https://kannadadunia.com/wp-content/uploads/2022/05/Students-exams.jpeg)
ಬೆಂಗಳೂರು : ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳು ಸರ್ಕಾರಿ ಕಾಲೇಜುಗಳಲ್ಲಿ ಇನ್ಮುಂದೆ ಏಕರೂಪದ ಶುಲ್ಕ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಉನ್ನತ ಶಿಕ್ಷಣದ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಕಲಾ, ವಿಜ್ಞಾನ, ವಾಣಿಜ್ಯ ವ್ಯವಹಾರ ಸೇರಿದಂತೆ ವಿವಿಧ ವಿಭಾಗಗಳಡಿ ಪ್ರತಿಯೊಂದು ಕೋರ್ಸ್ ಗಳಿಗೂ ಒಂದೇ ಮಾದರಿಯ ಶುಲ್ಕ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಇನ್ನು ಕನ್ನಡೇತರ ವಿದ್ಯಾರ್ಥಿಗಳು ಈ ಶುಲ್ಕದ ಜೊತೆಗೆ ಹೆಚ್ಚುವರಿಯಾಗಿ ಐದು ಸಾವಿರ ರೂ. ಎನ್ ಆರ್ ಐ ವಿದ್ಯಾರ್ಥಿಗಳಿಂದ 8ರಿಂದ12 ಸಾವಿರ ರೂ.ಮತ್ತು ವಿದೇಶಿ ವಿದ್ಯಾರ್ಥಿಗಳಿಗೆ 12 ಸಾವಿರ ರೂ. ವಿಶೇಷ ಶುಲ್ಕ ನಿಗದಿಪಡಿಸಲಾಗಿದೆ.
ವಿದ್ಯಾರ್ಥಿಗಳಿಂದ ಪಡೆಯುವ ಶುಲ್ಕದ ಜೊತೆಗೆ ಪರೀಕ್ಷೆಗಳಲ್ಲಿ ಮೌಲ್ಯಮಾಪಕರಿಗೆ ನೀಡುವ ಸಂಭಾವನೆ, ವಿವಿಧ ಭತ್ಯೆಗಳೂ ಸೇರಿದಂತೆ ಹಲವು ವಿಚಾರಗಳಲ್ಲೂ ಏಕರೂಪತೆ ತರಲು ಸರ್ಕಾರ ಆದೇಶ ಹೊರಡಿಸಿದೆ.