alex Certify BIG NEWS : ‘ಗೆಜೆಟೆಡ್ ಪ್ರೊಬೇಷನರಿ’ ಅರ್ಹ ಅಭ್ಯರ್ಥಿಗಳ ಆಯ್ಕೆಯಲ್ಲಿ ಕನ್ನಡಿಗರಿಗೆ ಅನ್ಯಾಯ ಆರೋಪ : ‘KPSC’ ಸ್ಪಷ್ಟನೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಗೆಜೆಟೆಡ್ ಪ್ರೊಬೇಷನರಿ’ ಅರ್ಹ ಅಭ್ಯರ್ಥಿಗಳ ಆಯ್ಕೆಯಲ್ಲಿ ಕನ್ನಡಿಗರಿಗೆ ಅನ್ಯಾಯ ಆರೋಪ : ‘KPSC’ ಸ್ಪಷ್ಟನೆ.!

ಬೆಂಗಳೂರು : ಕೆಪಿಎಸ್ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಮುಖ್ಯ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಗೆಜೆಟೆಡ್ ಪ್ರೊಬೇಷನರಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ  ಸುತ್ತೋಲೆ ಮೂಲಕ ಕೆಪಿಎಸ್ ಸಿ ಸ್ಪಷ್ಟನೆ ನೀಡಿದೆ.

ಆಯೋಗವು ಇತ್ತೀಚೆಗೆ ಪ್ರಕಟಿಸಿರುವ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯ ಆಗಿದೆಯೆಂದು ಸಮಾಜದ ಕೆಲವೊಂದು ವರ್ಗಗಳು ಆರೋಪಿಸಿದ್ದು, ಈ ವಿಷಯದ ಕುರಿತು ಕರ್ನಾಟಕ ಲೋಕಸೇವಾ ಆಯೋಗವು ಹಿಂದಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗಳ ಮಾಹಿತಿಯನ್ನು ಪರಿಶೀಲಿಸಲಾಗಿ 2017-18ರಲ್ಲಿ ಒಟ್ಟು 106 ಹುದ್ದೆಗಳು ಮತ್ತು 2023-24ರಲ್ಲಿ 384 ಹುದ್ದೆಗಳಿದ್ದು, ಇದಕ್ಕೆ ಸಂಬಂಧಿಸಿದಂತೆ ಈ ಹುದ್ದೆಗಳಿಗೆ 2017-18ರಲ್ಲಿ ಅನುಪಾತ 1:20 ಇದ್ದು, 2023-24ರ ಹುದ್ದೆಗಳಿಗೆ ಅನುಪಾತ 1:15 ಇರುತ್ತದೆ.

ಮುಂದುವರೆದು, ಈ ವಿಷಯದ ಬಗ್ಗೆ ತುಲನಾತ್ಮಕ ದತ್ತಾಂಶ ವಿಶ್ಲೇಷಣೆಯನ್ನು ನಡೆಸಿದ ನಂತರ 2023-24ರಲ್ಲಿ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆಯನ್ನು ತೆಗೆದುಕೊಂಡು ಮುಖ್ಯ ಪರೀಕ್ಷೆಗೆ ಅರ್ಹರಾದ ಕನ್ನಡ ಮಾಧ್ಯಮ ಅಭ್ಯರ್ಥಿಗಳ ಸಂಖ್ಯೆಗೂ, ಗೆಜೆಟೆಡ್ ಪ್ರೊಬೇಷನರ್ಸ್ 2017-18ರಲ್ಲಿ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆಯನ್ನು ತೆಗೆದುಕೊಂಡು ಅರ್ಹರಾಗಿದ್ದವರ ಸಂಖ್ಯೆಗೂ ಹೋಲಿಸಿದಲ್ಲಿ 2023-24ರಲ್ಲಿ ಕನ್ನಡ ಮಾಧ್ಯಮ ಅಭ್ಯರ್ಥಿಗಳ ಆಯ್ಕೆ ಅನುಪಾತವು ಶೇ6.50ರಷ್ಟು ಹೆಚ್ಚಳವಾಗಿರುವುದು ಕಂಡು ಬಂದಿರುತ್ತದೆ. ಆದ್ದರಿಂದ, ಮೇಲ್ಕಾಣಿಸಿದ ಆರೋಪವು ಸರಿಯಲ್ಲವೆಂದು ಮತ್ತು 2023-24ನೇ ಸಾಲಿನಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿರುವುದಿಲ್ಲವೆಂದು ಆಯೋಗವು ಸ್ಪಷ್ಟಪಡಿಸುತ್ತದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kaip tinkamai konservuoti stiklainius: naudingi patarimai Senelių skirtumai: paslaptingas reiškinys 10 patarimų, kaip nustoti prabusti naktį: miego ekspertai atskleidžia paprastą Kaip išvengti