![](https://kannadadunia.com/wp-content/uploads/2019/02/deli-cm-sidu-400x208-1.jpg)
ಮೈಸೂರು : ಡಿಸೆಂಬರ್ 23 ರ ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆ ನಡೆಯಲಿದ್ದು, ಸಭೆಯಲ್ಲಿ ಬರ ಪರಿಹಾರದ ಬಿಡುಗಡೆ ಬಗ್ಗೆ ತೀರ್ಮಾನವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಬರ ಪರಿಹಾರ ಸೇರಿದಂತೆ ರಾಜ್ಯದ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಪ್ರಕೃತಿ ವಿಕೋಪ ಕುರಿತಂತೆ ಕೂಡಲೇ ಉನ್ನತ ಮಟ್ಟದ ಸಭೆ ನಡೆಸಿ, ಪರಿಹಾರ ಬಿಡುಗಡೆ ಮಾಡಲು ಒತ್ತಾಯಿಸಿದ್ದರು.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ ರೈತರು, ಅದರಲ್ಲೂ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಎನ್.ಡಿ.ಆರ್.ಎಫ್. ಮಾರ್ಗಸೂಚಿಯನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ,18,177 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದರು.