![](https://kannadadunia.com/wp-content/uploads/2022/09/anganwadi.jpg)
ಬೆಂಗಳೂರು : ಗೌರವ ಧನ ಹೆಚ್ಚಳದ ಕುರಿತು ರಾಜ್ಯ ಸರ್ಕಾರದ 6ನೇ ಗ್ಯಾರಂಟಿ ಜಾರಿ ಸೇರಿದಂತೆ ಹಲವು ಬೇಡಿಕೆಗಳ ಒತ್ತಾಯಿಸಿ ಅಂಗನವಾಡಿ ನೌಕರರು ಫೆ.1 ರಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ಗೌರವ ಧನ ಹೆಚ್ಚಿಸುವುದಾಗಿ 6ನೇ ಗ್ಯಾರಂಟಿ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದು ತಿಂಗಳುಗಳೇ ಕಳೆದ್ರೂ ಇಲ್ಲಿವರೆಗೆ ಜಾರಿ ಮಾಡದ ಹಿನ್ನೆಲೆ ಯಲ್ಲಿ ಫೆ.1ರಂದು ಸ್ವಾತಂತ್ರ್ಯ ಉದ್ಯಾನವನ ದಲ್ಲಿ ಪ್ರತಿಭಟನೆ ನಡೆಸಲು ಅಂಗನವಾಡಿ ನೌಕರರು ತೀರ್ಮಾನಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ., ಸಹಾಯಕಿಯರಿಗೆ 10 ಸಾವಿರ ರೂ. ಗೌರವಧನ ನೀಡಬೇಕು. ನಿವೃತ್ತರಿಗೆ 3 ಲಕ್ಷ ರೂ. ಇಡುಗಂಟು ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗಿದೆ.