ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ನೀಡಿದೆ.
ಇದೀಗ ಬೆಂಗಳೂರಿನ ಸತ್ರ ನ್ಯಾಯಾಲಯವು ಡಿ.20 ರಿಂದ ಜ.5 ರವರೆಗೆ ಮೈಸೂರಿಗೆ ತೆರಳಲು ಅನುಮತಿ ನೀಡಿದೆ.
ಅನಾರೋಗ್ಯ ಪೀಡಿತರಾಗಿರುವ ತನ್ನ ತಾಯಿ ಜೊತೆ ಕಾಲ ಕಳೆಯಲು ಹಾಗೂ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ಮೈಸೂರಿಗೆ ತೆರಳಲು ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪುರಸ್ಕರಿಸಿ ಸಿಟಿ ಸಿವಿಲ್ ಕೋರ್ಟ್ ನ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಪ್ರಮುಖ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.ನಟ ದರ್ಶನ್, ಪವಿತ್ರಾಗೌಡ, ನಾಗರಾಜು, ಅನುಕುಮಾರ್, ಜಗದೀಶ್, ಲಕ್ಷ್ಮಣ್, ಪ್ರದೋಶ್ ರಾವ್ ಸೇರಿದಂತೆ 7 ಆರೋಪಿಗಳಿಗೂ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ನಟ ದರ್ಶನ್ ಹಾಗೂ ಗ್ಯಾಂಗ್ ಗೆ 6 ತಿಂಗಳ ಬಳಿಕ ಹೈಕೋರ್ಟ್ ನಲ್ಲಿ ಜಾಮೀನು ಮಂಜೂರಾಗಿದೆ.