![](https://kannadadunia.com/wp-content/uploads/2023/04/puneeth-kerehalli-1.jpg)
ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮುಗಲಭೆ ಯತ್ನಿಸಿರುವ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರ ರಕ್ಷಣೆ ಪಡೆಯ ಪುನೀತ್ ಕೆರೆಹಳ್ಳಿ ವಿರುದ್ಧ ದೂರು ದಾಖಲಾಗಿದೆ.
ರಾಷ್ಟ್ರ ರಕ್ಷಣಾ ಪಡೆ ವಾಟ್ಸಪ್ ಗ್ರೂಪ್ ನಲ್ಲಿ ಕೋಮುಗಲಭೆಗೆ ಪ್ರಚೋದನೆ ನೀಡುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗ ಸೈಬರ್ ಕ್ರೈಂಗೆ ದೂರು ನೀಡಿದೆ.
ರಾಷ್ಟ್ರ ರಕ್ಷಣಾ ಪಡೆಯ ವಾಟ್ಸಪ್ ಎನ್ನಲಾದ ಗ್ರೂಪ್ ನಲ್ಲಿ, ಕರ್ನಾಟಕದಲ್ಲಿ ಕೋಮುಗಲಭೆ ಎಬ್ಬಿಸೋದಕ್ಕೆ ನಮಗೆ ಬಿಜೆಪಿ ಬೆಂಬಲ ಕೊಟ್ಟಿದೆ. ಆದುದರಿಂದ ಎಲ್ಲಾ ಕಾರ್ಯಕರ್ತರು ರೆಡಿಯಾಗಿ ಪ್ರಿಪೇರ್ ಆಗಿರಿ, ಎಲ್ಲಿ ಏನು ಮಾಡಬೇಕು ಎಂಬುದು ನಾವು ಈ ಗ್ರೂಪ್ ನಲ್ಲಿ ಮಾಹಿತಿ ಕೊಡುತ್ತಾ ಇರುತ್ತೇವೆ. ಜೈ ರಾಷ್ಟ್ರ ರಕ್ಷಣಾ ಪಡೆ, 2024 ಕ್ಕೆ ಮತ್ತೊಮ್ಮೆ ಮೋದಿ ಎಂದು ಬರೆದು ಶೇರ್ ಮಾಡಲಾಗಿದೆ.