ಬೆಂಗಳೂರು : ರಾಜ್ಯ ಸರ್ಕಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.ಜಿಲ್ಲಾ ಉಸ್ಸುವಾರಿ ಕಾರ್ಯದರ್ಶಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆದೇಶಿಸಿದೆ.
ಏನಿದೆ ಆದೇಶದಲ್ಲಿ..?
ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಅವರ ಮುಖ್ಯ ಕಾರ್ಯದರ್ಶಿಗಳು/ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ಉಲ್ಲೇಖಿತ ಅಧಿಸೂಚನೆ ದಿನಾಂಕ:11.12.2023 ರಲ್ಲಿ ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು. ಮುಂದುವರೆದು, ಕೆಲವು ಜಿಲ್ಲೆಗಳಿಗೆ ಉಸ್ತುವಾರಿ ಅಧಿಕಾರಿಗಳನ್ನು ಈ ಅಧಿಸೂಚನೆಯೊಂದಿಗೆ ಲಗತ್ತಿಸಿರುವ ಪಟ್ಟಿಯಲ್ಲಿ ನಮೂದಿಸಿರುವಂತೆ ಮಾರ್ಪಡು ಮಾಡಿ ಜಿಲ್ಲಾ ಉಸ್ಸುವಾರಿ ಕಾರ್ಯದರ್ಶಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆದೇಶಿಸಿದೆ.
ಎಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಮಾನ್ಯ ಉಸ್ತುವಾರಿ ಸಚಿವರುಗಳು ಜಿಲ್ಲೆಯ ತಾಲ್ಲೂಕು ಕಛೇರಿ, ತಾಲ್ಲೂಕು / ಜಿಲ್ಲಾ ಆಸ್ಪತ್ರೆ ಹಾಗೂ ಇನ್ನಿತರ ಜಿಲ್ಲೆಯಲ್ಲಿನ ಪ್ರಮುಖ ಕಛೇರಿ / ಸ್ಥಳಗಳಿಗೆ ಭೇಟಿ ನೀಡಿದಂತ ಸಂದರ್ಭದಲ್ಲಿ ಅವರೊಂದಿಗೆ ಹಾಜರಿದ್ದು ಸಮನ್ವಯತೆಯೊಂದಿಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದು. ಅಲ್ಲದೇ ಎಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆ.ಡಿ.ಪಿ) ಸಭೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಕಡ್ಡಾಯವಾಗಿ ಹಾಜರಿರುವುದು ಎಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಮ್ಮ ಉಸ್ತುವಾರಿ ಜಿಲ್ಲೆಗೆ ಭೇಟಿ ನೀಡುವ ಮುನ್ನ ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಹಿತಿಯನ್ನು ನೀಡುವುದು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.