ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಭೀತಿ ನಡುವೆಯೇ AY4.2 ಮಾದರಿಯ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಈ ನಡುವೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರ ತಂಡ ರಾಜ್ಯ ಸರ್ಕಾರಕ್ಕೆ ಮುಂಜಾಗೃತಾ ಕ್ರಮವಾಗಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ವರದಿಯೊಂದನ್ನು ಸಲ್ಲಿಸಿದೆ.
AY4.2 ಹೊಸ ರೂಪಾಂತರಿಯ 7 ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದ್ದು, ಈ ನಿಟ್ಟಿನಲ್ಲಿ ಮಾಹಿತಿ ಸಂಗ್ರಹಿಸಿರುವ ಸಮಿತಿ, ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ರಾಜ್ಯಕ್ಕೆ ಮೂರನೇ ಅಲೆ ಆತಂಕ ಸದ್ಯಕ್ಕಿಲ್ಲ. ಆದರೆ ಮಕ್ಕಳಿಗೆ ಲಸಿಕೆ ಯೋಜನೆಯನ್ನು ಆದಷ್ಟು ಬೇಗ ಜಾರಿಗೊಳಿಸಬೇಕು ಎಂದು ಸಲಹೆ ನೀಡಿದೆ.
ಗಾಂಜಾ ಸೇವಿಸುವವರ ಪತ್ತೆಗಾಗಿ ಸಿಕ್ಕ ಸಿಕ್ಕವರ ವಾಟ್ಸಾಪ್ ಚಾಟ್ ಜಾಲಾಡಿದ ಪೊಲೀಸರು..! ನೆಟ್ಟಿಗರಿಂದ ಆಕ್ರೋಶ
ಕೋವಿಡ್ ಟೆಸ್ಟ್ ನಿರಂತರವಾಗಿ ಮುಂದುವರೆಸಬೇಕು. ಚಳಿಗಾಲ ಬರುತ್ತಿರುವುದರಿಂದ ಎಚ್ಚರಿಕೆಯಿಂದ ಹೆಜ್ಜೆ ಇಡುವ ಅಗತ್ಯವಿದೆ. ಹಬ್ಬ ಹರಿದಿನಗಳಲ್ಲಿ ಕೋವಿಡ್ ನಿಯಮ ಕಟ್ಟುನಿಟ್ಟಾಗಿ ಮುಂದುವರೆಸಬೇಕು. ಹೆಚ್ಚಿನ ಜನ ಸೇರುವುದನ್ನು ನಿರ್ಬಂಧಿಸಬೇಕು. ಮಾಸ್ಕ್, ಸಾಮಾಜಿಕ ಅಂತರ ಪಾಲನೆ, ಸ್ವಚ್ಛತೆಯ ಬಗ್ಗೆ ಹೆಚ್ಚಿನ ಗಮನ ಕೊಡುವುದು ಅಗತ್ಯ ಎಂದು ವರದಿಯಲ್ಲಿ ತಿಳಿಸಲಾಗಿದೆ ಎನ್ನಲಾಗಿದೆ.